ಮಣಿಪಾಲ: ಜೂನ್ ೧೮(ಹಾಯ್ ಉಡುಪಿ ನ್ಯೂಸ್) ಮಣಿಪಾಲದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಯುವಕನನ್ನು ಪೋಲಿಸರು ಬಂಧಿಸಿದ ಘಟನೆ ನಡೆದಿದೆ.
ಮಣಿಪಾಲ ಪೊಲೀಸ್ ಠಾಣೆ ಪೋಲಿಸ್ ನಿರೀಕ್ಷಕರಾದ ಮಂಜುನಾಥ ಎಂ ಇವರಿಗೆ ದಿನಾಂಕ 11-06-2022 ರಂದು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಸಾರ್ವಜನಿಕ ಸ್ಥಳದಲ್ಲಿ ಯುವಕನೋರ್ವ ಗಾಂಜಾ ಸೇವನೆ ಮಾಡುತ್ತಿದ್ದಾನೆ ಎಂದು ಬಂದು ಖಚಿತ ಮಾಹಿತಿಯಂತೆ ಸ್ಥಳಕ್ಕೆ ತೆರಳಿದಾಗ ಅಲ್ಲಿದ್ದ ಯುವಕನನ್ನು ಕೇಳಲಾಗಿ ಉಡುಪಿ,ಕುಕ್ಕಿಕಟ್ಟೆ ಮಸ್ಜಿದ್ ರೋಡ್ ನಿವಾಸಿ ನಿಹಾತ್ (24) ಎಂದು ತಿಳಿಸಿದ್ದು ಆತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಆತನು ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಬಗ್ಗೆ ಅನುಮಾನ ಬಂದ ಮೇರೆಗೆ ಆತನನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಆರೋಪಿತನು ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರು ದಿನಾಂಕ 17/06/2022 ರಂದು ದೃಢಪತ್ರವನ್ನು ನೀಡಿರುತ್ತಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ: 27 (B) NDPS ರಂತೆ ಪ್ರಕರಣ ದಾಖಲಾಗಿರುತ್ತದೆ.