HYNlsU6akAALQOS.jpg
Spread the love

ಬೆಂಗಳೂರು: ದಿನಾಂಕ:28-11-2026 (ಹಾಯ್ ಉಡುಪಿ ನ್ಯೂಸ್)

ಆಶಾ ಕಾರ್ಯಕರ್ತೆಯರು ನಮ್ಮ ಆಸ್ತಿ. ಅವರ ಸೇವೆಯನ್ನು ಗೌರವಿಸಿ, ಅವರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಇಂದು ಹೇಳಿದ್ದಾರೆ.

ಪ್ರಸ್ತುತ ಮಾಸಿಕ ಗೌರವಧನವನ್ನು ₹2,000 ಹೆಚ್ಚಿಸಲು ತೀರ್ಮಾನಿಸಲಾಗಿದ್ದು, ಈ ಹೆಚ್ಚಳವು ಜನವರಿ 1, 2027ರಿಂದ ಜಾರಿಗೆ ಬರಲಿದೆ. ನನ್ನ ಮನವಿಗೆ ಸ್ಪಂದಿಸಿ ಹೋರಾಟವನ್ನು ಕೈಬಿಟ್ಟ ಆಶಾ ಸಹೋದರಿಯರಿಗೆ ಹೃದಯಪೂರ್ವಕ ಅಭಿನಂದನೆಗಳು.

ಆಶಾ ಸಹೋದರಿಯರ ಕಷ್ಟಕ್ಕೆ ಸ್ಪಂದಿಸಿ, ಅವರ ಬದುಕಿನಲ್ಲಿ ಭರವಸೆಯ ಬೆಳಕು ಮೂಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಗೆ ಹೇಳಿದರು.

error: No Copying!