ಮಣಿಪಾಲ: ಜೂನ್ ೧೮ (ಹಾಯ್ ಉಡುಪಿ ನ್ಯೂಸ್) ಫ್ಲ್ಯಾಟ್ ನಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಬಂಧಿಸಿದ ಘಟನೆ ನಡೆದಿದೆ.
ಮಣಿಪಾಲ ಪೊಲೀಸ್ ಠಾಣೆ , ಪೊಲೀಸ್ ನಿರೀಕ್ಷಕರಾದ ಮಂಜುನಾಥ.ಎಂ.ಇವರಿಗೆ ಮಣಿಪಾಲ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರ ರಾಯಲ್‌ಎಂಬೆಸಿ ರೂಮ್‌ನಂ: 2902 ರಲ್ಲಿ ಇತ್ತೀಚೆಗೆ ಕೆಲವು ವಿದ್ಯಾರ್ಥಿಗಳು ಗಾಂಜಾ ಸೇವನೆ ಮಾಡುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪ್ಲಾಟ್‌ಗೆ ಹೋಗಿ ಪ್ಲಾಟ್‌ನಲ್ಲಿದ್ದ ಪೂರ್ಣ ಸೋಮೇಶ್ವರ್ (23), #1045/A, H.I.G , O.Y.H.S 3rd ಕ್ರಾಸ್, ಟಿಕೆ ಲೇಔಟ್ , 4th Stage , ಮೈಸೂರು ಎಂಬಾತನನ್ನು ವಿಚಾರಣೆ ಮಾಡಿದಾಗ ಆತನು ಗಾಂಜಾ ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದಿದ್ದು, ಆತನನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು , ಆತನು ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರು ಈ ದಿನ ದೃಢಪತ್ರವನ್ನು ನೀಡಿರುತ್ತಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ: 27 (B) NDPS ರಂತೆ ಪ್ರಕರಣ ದಾಖಲಾಗಿರುತ್ತದೆ.