ಬ್ರಹ್ಮಾವರ: ಜುಲೈ ೧ (ಹಾಯ್ ಉಡುಪಿ ನ್ಯೂಸ್) ಹಗಲಿನಲ್ಲಿ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ್ದ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಕದ್ದ ಘಟನೆ ನಡೆದಿದೆ.
ಬ್ರಹ್ಮಾವರ ತಾಲೂಕಿನ ಹೇರಾಡಿ ಗ್ರಾಮದ ಬಾರ್ಕೂರು ಎನ್ ಜೆಸಿ ಕಾಲೇಜಿನ ಎದುರು ನಿವಾಸಿ ಶ್ರೀ ವೇಣುಗೋಪಾಲಕೃಷ್ಣ ವಿವಿಧ್ದೋದೇಶ ಸೌಹರ್ದ ಸಹಕಾರಿ ಸಂಘದಲ್ಲಿ ಕ್ಲರ್ಕ್ ಆಗಿ ಉದ್ಯೋಗ ಮಾಡಿಕೊಂಡಿರುವ ಸಂಗೀತ (29) ಅವರು ದಿನಾಂಕ 30/06/2022ರಂದು ಬೆಳಿಗ್ಗೆ 09:00 ಗಂಟೆಗೆ ಮನೆಯಿಂದ ಬಾಗಿಲಿಗೆ ಬೀಗ ಹಾಕಿ ಕೆಲಸಕ್ಕೆ ಹೋಗಿದ್ದು, ಸಂಜೆ 6:00ಗಂಟೆಗೆ ಕೆಲಸ ಮುಗಿಸಿ ಮನೆಗೆ ಬಂದಾಗ ಮನೆಯ ಎದುರು ಬಾಗಿಲಿನ ಚಿಲಕದ ಕೊಂಡಿ ಮುರಿದು ಕೊಂಡು ಬಾಗಿಲು ತೆರೆದುಕೊಂಡಿದ್ದು, ಮನೆಯ ಒಳಗೆ ಹೋಗಿ ನೋಡಿದಾಗ ಯಾರೋ ಕಳ್ಳರು ಹಾಲ್‌ನಲ್ಲಿ ಇರಿಸಿದ್ದ ಕಬ್ಬಿಣದ ಟ್ರಂಕ್‌ನ ಬೀಗ ಒಡೆದು ಅದರ ಒಳಗಡೆಯಲ್ಲಿದ್ದ ಬಟ್ಟೆಗಳನ್ನು ಚೆಲ್ಲಾಪಿಲ್ಲಿಯಾಗಿ ಮಾಡಿ ಅದರ ಒಳಗಡೆ ಇದ್ದ ಸುಮಾರು 11.1/4 ಗ್ರಾಂ ತೂಕದ ಚಿನ್ನಾಭರಣ ಹಾಗೂ ಒಂದು ಜೊತೆ ಬೆಳ್ಳಿಯ ಕಾಲುಚೈನನ್ನು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಚಿನ್ನಾಭರಣಗಳ ಅಂದಾಜು ಮೌಲ್ಯ 90,000/- ಆಗಿರುತ್ತದೆ ಎಂದು ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.