Spread the love


ಉಡುಪಿ: ಜುಲೈ ೪(ಹಾಯ್ ಉಡುಪಿ ನ್ಯೂಸ್) ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ಇವರ ಮಾಸಿಕ ಸಭೆ ನಡೆಯಿತು.

ದಿನಾಂಕ 3/7/2020 ರ ಭಾನುವಾರ ಮಧ್ಯಾಹ್ನ 3:30 ಗಂಟೆಗೆ ರಾಜ್ಯಾಧ್ಯಕ್ಷರಾದ ಟಿ ಎ ,ನಾರಾಯಣ ಗೌಡರ ಆದೇಶದಂತೆ ಜಿಲ್ಲಾಧ್ಯಕ್ಷರಾದ ಶ್ರೀಯುತ ಸುಜಯ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಮಾಸಿಕ ಸಭೆ ನಡೆಯಿತು.
ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರು ಸಂಘಟನೆ ಬಲಗೊಳಿಸುವ ಬಗ್ಗೆ ಮಾತನಾಡಿ, ಸರ್ವರ ಸಲಹೆಯನ್ನು ಸ್ವೀಕರಿಸಿದರು. ರಾಜ್ಯ ಸರ್ಕಾರದ ಅದೇಶದಂತೆ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮ ಫಲಕ ಖಡ್ಡಾಯ ಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಹಾಗೆಯೇ ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರ ಹುಟ್ಟು ಹಬ್ಬ ಹಾಗೂ ಕಾಪು ತಾಲೂಕು ಘಟಕದ ಅಧ್ಯಕ್ಷೆ ಶ್ರೀಮತಿ ಗೀತಾ ರವರ ಮದುವೆಯ ದಿನವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು.
ಈ ಸಂಧರ್ಭದಲ್ಲಿ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಶ್ರಿಯುತ ಉಮೇಶ್ ಶೆಟ್ಟಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯಕ್, ಜಿಲ್ಲಾ ಮಹಿಳಾ ಘಟಕದ ಪ್ರದಾನ ಕಾರ್ಯದರ್ಶಿ ಮುಕ್ತ ಪ್ರಿಯಾ, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರಾದ ಎಂ.ಬಿ. ದೇವರಾಜ್, ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರಾದ ಫ್ರ್ಯಾಂಕಿ ಡಿಸೋಜ, ಉಡುಪಿ ತಾಲೂಕು ಅಧ್ಯಕ್ಷರಾದ ಅ. ರಾ.ಪ್ರಭಾಕರ್ ರಾಜ್ ಪೂಜಾರಿ ,ಕಾಪು ತಾಲೂಕು ಘಟಕದ ಅಧ್ಯಕ್ಷರಾದ ವೀರೇಶ್ ಪಿ.ಕೆ, ಕಾಪು ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಗೀತಾ, ಜಿಲ್ಲಾ ಘಟಕದ ಸಲಹೆಗಾರ್ತಿ ಶ್ರೀಮತಿ ಸುನಂದಾ, ಬ್ರಹ್ಮಾವರ ತಾಲೂಕು ಘಟಕದ ಉಪಾಧ್ಯಕ್ಷರಾದ ರೋಷನ್ ಬಂಗೇರಾ, ಬ್ರಹ್ಮಾವರ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ದೇವಕಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೋಹನ್ ಕಲ್ಮಾಡಿ ಹಾಗೂ ಅಲ್ಫೋನ್ಸ್ ಮಿನೇಜಸ್, ಜಿಲ್ಲಾ ಮಹಿಳಾ ಸಾಂಸ್ಕೃತಿಕ ಅಧ್ಯಕ್ಷೆ ಶ್ರೀಮತಿ ದೀಪಾ, ಜಿಲ್ಲಾ ಕಾರ್ಮಿಕ ಘಟಕದ ಉಪಾಧ್ಯಕ್ಷ ಗೋಪಾಲ್ ದೊರೆ, ಕಾರ್ಮಿಕ ಘಟಕದ ಪ್ರದಾನ ಕಾರ್ಯದರ್ಶಿ ಸಿದ್ದಣ್ಣ ಪುಜಾರಿ, ಸದಸ್ಯರಾದ ಶ್ರೀಮತಿ ಲಕ್ಷ್ಮೀ,ಶ್ರೀಮತಿ ಆಶಾ ಶೆಟ್ಟಿ, ಪ್ರಸಾದ್ ರೈ, ಪ್ರಕಾಶ್, ಶಾಂತಣ್ಣ, ಈರಣ್ಣ, ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯಕ್ ಧನ್ಯವಾದ ಸಮರ್ಪಿಸಿದರು.

error: No Copying!