ಹುಬ್ಬಳ್ಳಿ: ಜುಲೈ 5 (ಹಾಯ್ ಉಡುಪಿ ನ್ಯೂಸ್) ಹುಬ್ಬಳ್ಳಿಯಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಯವರನ್ನು ವಾಸ್ತು ಕೇಳುವ ನೆಪದಲ್ಲಿ ಇಬ್ಬರು ಯುವಕರು ಚೂರಿಯಿಂದ ಇರಿದು ಬರ್ಬರ ಹತ್ಯೆ ಮಾಡಿದ ಘಟನೆ ನಡೆದಿದೆ.
ಸರಳ ವಾಸ್ತು ಕಾರ್ಯಕ್ರಮದ ಮೂಲಕ ದೇಶದಾದ್ಯಂತ ಮನೆಮಾತಾಗಿದ್ದ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯಲ್ಲಿ ಇಂದು ಕೊಲೆ ಮಾಡಲಾಗಿದೆ. ಭಕ್ತರ ಸೋಗಿನಲ್ಲಿ ಬಂದು ಚಾಕುವಿನಿಂದ ಹಲವು ಬಾರಿ ಇರಿದು ಕೊಲೆಗಡುಕರು ಪರಾರಿಯಾಗಿದ್ದಾರೆ .
ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಗುರೂಜಿ ಕೊಲೆಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್ ಗುರೂಜಿ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದರು. ಕೊಲೆಗೆ ಕಾರಣ ಏನೆಂಬುದು ಇನ್ನಷ್ಟೇ ತಿಳಿಯಬೇಕಿದೆ.