Spread the love

ಕಾರ್ಕಳ : ಜುಲೈ ೧೧ (ಹಾಯ್ ಉಡುಪಿ ನ್ಯೂಸ್) ದೇವಸ್ಥಾನದ ಬೀಗ ಮುರಿದು ಕಳ್ಳತನ ನಡೆಸಿದ ಘಟನೆ ಬೋಳ ಗ್ರಾಮದಲ್ಲಿ ನಡೆದಿದೆ.

ದಿನಾಂಕ 10/07/2022 ರಂದು ರಾತ್ರಿ ಯಾರೋ ಕಳ್ಳರು ಕಾರ್ಕಳ ತಾಲೂಕು ಬೋಳ ಗ್ರಾಮದ ಬೋಳ ಕೋಡಿಯಲ್ಲಿರುವ ಶ್ರೀ ಮೃತ್ಯುಂಜಯ ರುದ್ರ ಸೋಮನಾಥೇಶ್ವರ ದೇವಸ್ಥಾನದ ಉತ್ತರ ದಿಕ್ಕಿನ ಮರದ ಮತ್ತು ಕಬ್ಬಿಣದ ಬಾಗಿಲುಗಳಿಗೆ ಹಾಕಿದ ಬೀಗಗಳನ್ನು ಯಾವುದೋ ಸಲಕರಣೆಯಿಂದ ಮುರಿದು ಒಳ ಪ್ರವೇಶಿಸಿ, ದೇವಸ್ಥಾನದ ಗರ್ಭಗುಡಿಯ ಬಾಗಿಲಗೆ ಹಾಕಿದ ಬೀಗವನ್ನು ಯಾವುದೇ ಸಲಕರಣೆಯಿಂದ ಮುರಿದು  ದೇವರ ಪೀಠದಲ್ಲಿ ಇರಿಸಿದ್ದ ಪುರಾತನ ಪಂಚಲೋಹದ ಬಲಿ ಮೂರ್ತಿ, ಗಣಪತಿ ಗುಡಿಯ ಬಾಗಿಲಿಗೆ ಹಾಕಿದ ಬೀಗವನ್ನು ಮುರಿದು ಅದರೊಳಗೆ ಇರಿಸಿದ್ದ ಸುಮಾರು 5,000/- ರೂಪಾಯಿ ಮೌಲ್ಯದ ಗಣಪತಿಯ ಬೆಳ್ಳಿಯ ಮುಖವಾಡ, ತೀರ್ಥ ಮಂಟಪದ ಬಳಿ ಇರಿಸಿದ್ದ ಕಬ್ಬಿಣದ ಕಾಣಿಕೆ ಡಬ್ಬಿಯ ಬಾಗಿಲನ್ನು ಯಾವುದೋ ಸಲಕರಣೆಯಿಂದ ಮುರಿದು ತೆರೆದು, ಅದರೊಳಗೆ ಇದ್ದ ನಗದು ಅಂದಾಜು 45,000-50,000 ರೂಪಾಯಿಗಳನ್ನು (ನೋಟುಗಳು ಮಾತ್ರ) ಹಾಗೂ ದೇವಸ್ಥಾನ ಕಛೇರಿಯ ಒಳಗೆ ಅಳವಡಿಸಿದ್ದ ಸುಮಾರು 9000/- ರೂಪಾಯಿ ಮೌಲ್ಯದ HIK VISION ಕಂಪೆನಿಯ DVR ನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂದು ಈ ಬಗ್ಗೆ  ಶ್ರೀನಿವಾಸ ಭಟ್, (44), ದೇವಸ್ಯ ಮನೆ, ಬೋಳ ,ಬೋಳ ಗ್ರಾಮ, ಕಾರ್ಕಳ ರವರು ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

error: No Copying!