ಗಂಗೊಳ್ಳಿ: ಜುಲೈ 22 (ಹಾಯ್ ಉಡುಪಿ ನ್ಯೂಸ್) ಮರವಂತೆ ಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ಆಡುತ್ತಿದ್ದವನನ್ನು ಬಂಧಿಸಿದ ಘಟನೆ ನಡೆದಿದೆ.
ಗಂಗೊಳ್ಳಿ ಠಾಣೆಯ ಪಿಎಸ್ಐ ವಿನಯ್ ಕೊರ್ಲಹಳ್ಳಿಯವರು ದಿನಾಂಕ 21/07/2022 ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಬೈಂದೂರು ತಾಲೂಕು ಮರವಂತೆ ಗ್ರಾಮದ ಮರವಂತೆ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಪ್ರಜೀತ್, ಎಂಬುವವರು ಅಕ್ರಮವಾಗಿ ಮಟ್ಕಾ ಜುಗಾರಿ ನಡೆಸುತ್ತಿದ್ದ ಬಗ್ಗೆ ಮರವಂತೆ ಗ್ರಾಮದ ಬೀಟ್ ಸಿಬ್ಬಂದಿ ಪಿ.ಸಿ ಮಂಜುನಾಥ ರವರು ನೀಡಿದ ಖಚಿತ ಮಾಹಿತಿ ಮೇರೆಗೆ ಠಾಣೆಯ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಬೆಳಿಗ್ಗೆ 11:00 ಗಂಟೆಗೆ ದಾಳಿ ನಡೆಸಿ ಮಟ್ಕಾ ಜುಗಾರಿ ನಡೆಸುತ್ತಿದ್ದ ಪ್ರಜೀತ್, ಪ್ರಾಯ: 29 ವರ್ಷ ,ಶ್ರೀ ಮೂಕಾಂಬಿಕ, ಜನತಾ ಕಾಲೋನಿ, ವಂಡ್ಸೆ ಗ್ರಾಮ, ಕುಂದಾಪುರ ತಾಲೂಕು ನಿವಾಸಿ ಇವನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ತಾನು ಸ್ವಂತ ಲಾಭಕ್ಕೋಸ್ಕರ ಮಟ್ಕ ಚೀಟಿ ಬರೆಯುತ್ತಿರುವುದಾಗಿ ಒಪ್ಪಿ ಕೊಂಡಿದ್ದು ಮಟ್ಕಾ ಜುಗಾರಿಗೆ ಬಳಸಿದ ಮಟ್ಕ ಚೀಟಿ-1, ಬಾಲ್ ಪೆನ್ನು-1 ಹಾಗೂ 1,400/- -ರೂ ನಗದನ್ನು ಸ್ವಾಧೀನ ಪಡಿಸಿಕೊಂಡು ಆತನನ್ನು ವಶಕ್ಕೆ ಪಡೆದು ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.