ಕುಂದಾಪುರ: ಜುಲೈ 23 (ಹಾಯ್ ಉಡುಪಿ ನ್ಯೂಸ್) ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜುಗಾರಿ ಆಡಿದ ನಾಲ್ಕು ಮಂದಿ ಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಪೋಲಿಸ್ ಉಪನಿರೀಕ್ಷಕರಾದ ನಿರಂಜನ್ ಗೌಡ ಬಿ.ಎಸ್ ಇವರಿಗೆ ದಿನಾಂಕ 21-07-2022 ರಂದು ಕುಂದಾಪುರ ತಾಲೂಕು ಕರ್ಕುಂಜೆ ಗ್ರಾಮದ ಜಾಡ್‌ಕಟ್ಟು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೆಲವು ವ್ಯಕ್ತಿಗಳು ಹಣವನ್ನು ಪಣವಾಗಿಟ್ಟು ತಮ್ಮ ಸ್ವಂತ ಲಾಭಕ್ಕಾಗಿ ಇಸ್ಪೀಟು ಎಲೆಗಳಿಂದ ಅಂದರ್ ಬಾಹರ್ ಎಂಬ ಇಸ್ಪೀಟು ಆಟವಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 1) ರಾಮ, 2) ಶಂಕರ ಮೊಗವೀರ, 3) ಬಾಸ್ಕರ ಪೂಜಾರಿ, 4) ಶಿವರಾಮ ಇವರನ್ನು ಸಿಬ್ಬಂದಿಯವರ ಸಹಾಯದಿಂದ ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದು ಒಬ್ಬಾತನು ಓಡಿ ತಪ್ಪಿಸಿಕೊಂಡಿರುತ್ತಾನೆ. ಇಸ್ಪೀಟ್‌ಜುಗಾರಿ ಆಟಕ್ಕೆ ಬಳಸಿದ್ದ ನಗದು ರೂಪಾಯಿ 2100/, ಬಿಳಿ ಬಣ್ಣದ ಪ್ಲಾಸ್ಟಿಕ್ ಚೀಲ-1, ಇಸ್ಪೀಟು ಎಲೆಗಳು-52 ನ್ನು ಸ್ವಾಧೀನ ಪಡಿಸಿ ಕೊಂಡಿದ್ದು ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.