ಗಂಗೊಳ್ಳಿ: ಆಗಸ್ಟ್ 3 (ಹಾಯ್ ಉಡುಪಿ ನ್ಯೂಸ್) ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದಿರುವ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಣಿಪಾಲ ರಜತಾದ್ರಿಯಲ್ಲಿರುವ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಯಾಗಿರುವ ಮಹೇಶ ದೇವಾಡಿಗರವರಿಗೆ ಗಂಗೊಳ್ಳಿ ಗ್ರಾಮದ ಗುಡ್ಡೆಕೇರಿ ನಿವಾಸಿಯಾಗಿರುವ ಶ್ರೀಧರ್ ಹಾಗೂ ರಾಜೇಶ್ವರಿ ದಂಪತಿಗಳು ಕಾನೂನು ಬಾಹಿರವಾಗಿ ಮಗುವನ್ನು ದತ್ತುಪಡೆದಿರುವ ಬಗ್ಗೆ ಮಾಹಿತಿ ಬಂದಿದ್ದು ದಿನಾಂಕ: 26-07-2022 ರಂದು ಶ್ರೀದರ್ ಹಾಗೂ ರಾಜೇಶ್ವರಿಯವರ ವಿಳಾಸಕ್ಕೆ ಅಧಿಕಾರಿಗಳು ಭೇಟಿ ನೀಡಿ ವಿಚಾರಿಸಿದಾಗ ದಿನಾಂಕ:16-07-2022 ರಂದು 9 ತಿಂಗಳಿನ ಹೆಣ್ಣು ಮಗುವನ್ನು ಉತ್ತರಕನ್ನಡ ಜಿಲ್ಲೆಯ ಶಿರಸಿಯಿಂದ ಯಾವುದೇ ದಾಖಲೆಗಳಿಲ್ಲದೇ ಅನಧಿಕೃತವಾಗಿ ತಂದು ಸಾಕುತ್ತಿರುವುದಾಗಿ ತಿಳಿಸಿದ್ದು ಹಾಗೂ ಮಗುವನ್ನು ಯಾರಿಂದ ಪಡೆದುಕೊಂಡಿದ್ದಾರೆ ಎಂಬ ಬಗ್ಗೆ ಸರಿಯಾದ ಮಾಹಿತಿಯನ್ನು ದಂಪತಿಗಳು ನೀಡಿರುವುದಿಲ್ಲ. ಮಗುವಿನ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ಮಗುವನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರ ಆದೇಶದ ಮೇರೆಗೆ ಸಂತೆಕಟ್ಟೆಯಲ್ಲಿರುವ ಕೃಷ್ಣಾನುಗ್ರಹ ಅರ್ಹ ದತ್ತು ಸಂಸ್ಥೆಯಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ದಂಪತಿಗಳ ಬಳಿ ಮಕ್ಕಳ ಕಲ್ಯಾಣ ಸಮಿತಿಗೆ ಮಗುವಿಗೆ ಸಂಬಂಧಿಸಿದ ದಾಖಲೆಗಳೊಂದಿಗೆ ಹಾಜರಾಗುವಂತೆ ತಿಳಿಸಿದ್ದು ,ಈವರೆಗೂ ಮಗುವಿನ ಬಗ್ಗೆ ಯಾವುದೇ ದಾಖಲೆಗಳನ್ನು ಹಾಜರುಪಡಿಸಿರುವುದಿಲ್ಲವಾದ ಕಾರಣ ದಂಪತಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಯವರ ದೂರಿನ ಮೇರೆಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.