ಕುಂದಾಪುರ: ಆಗಸ್ಟ್ 7(ಹಾಯ್ ಉಡುಪಿ ನ್ಯೂಸ್) ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಟ ಆಡುತ್ತಿದ್ದವರನ್ನು ಪೋಲಿಸರು ಬಂಧಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ.
ಕುಂದಾಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರಸಾದ್ ಕುಮಾರ್ ಇವರು ದಿನಾಂಕ 06/08/2022 ರಂದು ಠಾಣೆಯಲ್ಲಿ ಕರ್ತವ್ಯ ದಲ್ಲಿರುವಾಗ ಕುಂದಾಪುರ ತಾಲೂಕು ವಡೇರಹೋಬಳಿ ಗ್ರಾಮದ ಶಾಸ್ತ್ರೀ ಪಾರ್ಕ್ ಬಳಿಯ ಇಂದಿರಾ ಕ್ಯಾಂಟೀನ್ ಹಿಂಬದಿಯ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದ ಬಗ್ಗೆ ಸಾರ್ವಜನಿಕರಿಂದ ಬಂದ ಖಚಿತ ವರ್ತಮಾನದಂತೆ ಇಲಾಖಾ ವಾಹನದಲ್ಲಿ ಸಿಬ್ಬಂದಿಯವರೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದಾಗ 6 ಜನರು ಗುಂಪಾಗಿ ಕುಳಿತು ಅಂದರ್ ಬಾಹರ್ ಅದೃಷ್ಟದ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದು ಅವರನ್ನು ಹಿಡಿದು ವಿಚಾರಿಸಿದಾಗ ಅವರ ಹೆಸರು ಅಭಿಜೀತ್, ಸುಕೇಶ ಕೆ, ವಿಲಾಸ್ ಆಚಾರ್ಯ, ಶಶಾಂಕ ಶೆಟ್ಟಿ, ಸನತ್ ಕುಮಾರ ಶೆಟ್ಟಿ, ಸಚಿನ್ ಎಂಬುವವರನ್ನು ಬಂಧಿಸಿ ವಶಕ್ಕೆ ಪಡೆದು, ಇಸ್ಪೀಟ್ ಆಟಕ್ಕೆ ಬಳಸಿದ್ದ 52 ಇಸ್ಪೀಟು ಎಲೆಗಳು, ಹಳೆ ಪೇಪರ್, ಆಪಾದಿತರ ವಶದಲ್ಲಿದ್ದ 5050/-ರೂಪಾಯಿ ನಗದು ಹಣವನ್ನು ಸ್ವಾದೀನಪಡಿಸಿ ಕೊಂಡಿರುತ್ತಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.