ಉಡುಪಿ: ಆಗಸ್ಟ್ 9 (ಹಾಯ್ ಉಡುಪಿ ನ್ಯೂಸ್) ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ಆಡುತ್ತಿದ್ದವರನ್ನು ಪೊಲೀಸರು ಬಂಧಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ ನಗರ ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾದ ವಿಜಯ್ .ಸಿ ಇವರಿಗೆ ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿರುವುದಾಗಿ ಸಾರ್ವಜನಿಕರಿಂದ ಬಂದ ಮಾಹಿತಿಯಂತೆ ಕೂಡಲೇ ದಾಳಿ ನಡೆಸಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಉಡುಪಿ ತಾಲೂಕು,ಕಡೆಕಾರು ಗ್ರಾಮದ, ಕಡೆಕಾರು ಪಂಚಾಯತ್ ಹತ್ತಿರದ ಶುಭನಿಲಯ ನಿವಾಸಿ ಸಂತೋಷ (46) ಎಂಬಾತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ತಾನು ಕಮೀಷನ್ ಹಣಕೋಸ್ಕರ ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಹಣವನ್ನು ಸಂಗ್ರಹಿಸುತ್ತಿದ್ದು, ತಾನು ಸಂಗ್ರಹಿಸುತ್ತಿದ್ದ ಹಣವನ್ನು
ಲಿಯೋ ಕರ್ನೆಲಿಯೋ ಗೆ ಕೊಡುತ್ತಿರುವುದಾಗಿ ತಿಳಿಸಿದ್ದು, ಆತನ ವಶದಿಂದ ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ ನಗದು ಹಣ ರೂಪಾಯಿ 3490 /- ಮತ್ತು ಮಟ್ಕಾ ನಂಬ್ರ ಬರೆದ ಚೀಟಿ-6, ಬಾಲ್ಪೆನ್-1, ಸ್ವಾಧೀನಪಡಿಸಿಕೊಂಡಿದ್ದು , ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.