Spread the love

ಕಾರ್ಕಳ: ಆಗಸ್ಟ್ 31(ಹಾಯ್ ಉಡುಪಿ ನ್ಯೂಸ್) ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ಆಡಿ ಸುತ್ತಿದ್ದವನನ್ನು ಬಂಧಿಸಿದ ಘಟನೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದಿನಾಂಕ30-08-2022 ರಂದು ಮಧ್ಯಾಹ್ನ 2:30 ಗಂಟೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಪಿಎಸ್ಐ (ತನಿಖೆ) ಜನಾರ್ದನ ಕೆ. ಇವರಿಗೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಬೆರಂದೊಟ್ಟು ಕ್ರಾಸ್ ಸಾರ್ವಜನಿಕ ಬಸ್ಸು ನಿಲ್ದಾಣದ ಬಳಿ ನವೀನ್ ಎಂಬಾತ ತನ್ನ ಸ್ವಂತ ಲಾಭಕ್ಕೋಸ್ಕರ 1 ರೂ ಗೆ 70 ರೂಪಾಯಿ ನೀಡುವುದಾಗಿ ಸಾರ್ವಜನಿಕರಿಂದ ಹಣವನ್ನು ಪಣವಾಗಿಟ್ಟು ಹಣವನ್ನು ಪಡೆದುಕೊಂಡು ಮಟ್ಕಾ ಜುಗಾರಿ ಆಟ ಆಡಿಸುತ್ತಿದ್ದಾನೆ ಎಂಬ ಬಗ್ಗೆ ಖಚಿತ ಮಾಹಿತಿ ಬಂದಿದ್ದು ಠಾಣಾ ಸಿಬ್ಬಂದಿಯವರೊಂದಿಗೆ ಸ್ಥಳಕ್ಕೆ ದಾಳಿ ನಡೆಸಿ ಆತನನ್ನು  ವಶಕ್ಕೆ ಪಡೆದು ಆತನ ವಶದಲ್ಲಿ ಮಟ್ಕಾ ಜುಗಾರಿ  ಆಟದಿಂದ ಸಂಗ್ರಹಿಸಿದ  ನಗದು ರೂ 1315/-,  ಮಟ್ಕಾ ನಂಬ್ರ ಬರೆದ ಚೀಟಿ ಮತ್ತು ಬಾಲ್‌ ಪೆನ್‌ -1 ನ್ನು ವಶಕ್ಕೆ ಪಡೆದು ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

error: No Copying!