Spread the love

“ಗಂಗೊಳ್ಳಿ: ಸೆಪ್ಟೆಂಬರ್ 9 (ಹಾಯ್ ಉಡುಪಿ ನ್ಯೂಸ್) ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಅಮಲಿನಲ್ಲಿದ್ದ ಮೂವರನ್ನು ಬಂಧಿಸಿದ ಘಟನೆ ನಡೆದಿದೆ.

ದಿನಾಂಕ 07/09/2022 ರಂದು ವಿನಯ್‌ ಎಮ್‌ ಕೊರ್ಲಹಳ್ಳಿ , ಪೊಲೀಸ್‌ ಉಪನಿರೀಕ್ಷಕರು, ಗಂಗೊಳ್ಳಿ ಪೊಲೀಸ್ ಠಾಣೆ ಇವರು ರೌಂಡ್ಸ್‌ ಕರ್ತವ್ಯದಲ್ಲಿರುವಾಗ ತ್ರಾಸಿ ಗ್ರಾಮದ ತ್ರಾಸಿ ಪ್ರವಾಸಿ ಮಂದಿರದ ಬಳಿ ಬೀಚ್‌ ನಲ್ಲಿ ಕೆಲವು ಹುಡುಗರು ಕುಳಿತು ಗಾಂಜಾ ಸೇವಿಸುತ್ತಿರುವುದಾಗಿ ದೊರೆತ ಖಚಿತ ಮಾಹಿತಿಯಂತೆ ಹೋಗಿ ಪರಿಶೀಲಿಸಿದಾಗ 3 ಜನರು ಕುಳಿತುಕೊಂಡಿರುವುದು  ಕಂಡು ಬಂದಿದ್ದು, ಅವರನ್ನು ವಿಚಾರಿಸಿದಾಗ ತಾವು 1) ಆಕಾಶ್‌ ಹಳಿಯಾಳ್, 2) ಸ್ನೇಹಿತ್, 3) ಶಿವಪ್ರಸಾದ್, ಎಂಬುವುದಾಗಿ ತಿಳಿಸಿದ್ದು ಇವರುಗಳು ಗಾಂಜಾದಂತಹ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದ ಮೇರೆಗೆ ಕುಂದಾಪುರ ಶ್ರೀ ಮಾತಾ ಆಸ್ಪತ್ರೆ ವೈಧ್ಯಾದಿಕಾರಿಯವರ ಮುಂದೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಅವರುಗಳ ಪೈಕಿ   ಆಕಾಶ್‌ ಹಳಿಯಾಳ್ ಎಂಬಾತನು ಗಾಂಜಾ ಸೇವನೆ ಮಾಡಿರುವುದು ದ್ರಡ ಪಟ್ಟಿದ್ದು, ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಗಂಗೊಳ್ಳಿ: ದಿನಾಂಕ 07/09/2022 ರಂದು ಗಂಗೊಳ್ಳಿ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಎಮ್ ಕೊರ್ಲಹಳ್ಳಿ ಇವರಿಗೆ ತ್ರಾಸಿ ಗ್ರಾಮದ ತ್ರಾಸಿ ಬೀಚ್‌ ಬಳಿಯ ಪಾರ್ಕ್ ನಲ್ಲಿ ಕೆಲವು ಹುಡುಗರು ಕುಳಿತು ಗಾಂಜಾ ಸೇವಿಸುತ್ತಿರುವುದಾಗಿ ದೊರೆತ ಮಾಹಿತಿಯಂತೆ  ಹೋಗಿ  ಪರಿಶೀಲಿಸಿದಾಗ 4 ಜನರು ಕುಳಿತುಕೊಂಡಿರುವುದು  ಕಂಡು ಬಂದಿದ್ದು, ಅವರನ್ನು ವಿಚಾರಿಸಿದಾಗ 1) ಮಂಜುನಾಥ,, 2) ವಿನೋದ, 3) ಕಾರ್ತಿಕ್, 4) ಪುರುಷೋತ್ತಮ್,  ಎಂಬುವುದಾಗಿ ತಿಳಿಸಿದ್ದು ಇವರುಗಳು ಗಾಂಜಾದಂತಹ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದ ಮೇರೆಗೆ ಕುಂದಾಪುರ ಶ್ರೀ ಮಾತಾ ಆಸ್ಪತ್ರೆ ವೈಧ್ಯಾದಿಕಾರಿಯವರ ಮುಂದೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಇವರುಗಳ ಪೈಕಿ 1) ಕಾರ್ತಿಕ್, 2) ಪುರುಷೋತ್ತಮ್  ಇವರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.”

error: No Copying!