ಗಂಗೊಳ್ಳಿ: ಸೆಪ್ಟೆಂಬರ್ 20 (ಹಾಯ್ ಉಡುಪಿ ನ್ಯೂಸ್) ತ್ರಾಸಿ ಗ್ರಾಮದಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಆಹಾರ ನಿರೀಕ್ಷಕರು ಪೋಲೀಸರ ಸಹಾಯದಿಂದ ದಾಳಿ ನಡೆಸಿ ಬಂಧಿಸಿದ್ದಾರೆ.
ದಿನಾಂಕ: 19/09/2022 ರಂದು ಕುಂದಾಪುರ ವಿಭಾಗದ ಆಹಾರ ನಿರೀಕ್ಷಕರಾದ ಸುರೇಶ್ ಹೆಚ್.ಎಸ್, ಇವರಿಗೆ ಕಾನೂನು ಬಾಹಿರವಾಗಿ ಅಕ್ರಮ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಯಾರೋ ನಾಡಾ ಕಡೆಯಿಂದ ಸಾಗಾಟ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಗಂಗೊಳ್ಳಿ ಪೊಲೀಸ್ ಠಾಣಾ ಸಿಬ್ಬಂದಿಯವರೊಂದಿಗೆ ಕುಂದಾಪುರ ತಾಲೂಕು, ತ್ರಾಸಿ ಗ್ರಾಮದ ಮೋವಾಡಿ ಗಾಣದಮಕ್ಕಿ ಕ್ರಾಸ್ ಬಳಿ, ಕಾದು ಕುಳಿತಿರುವಾಗ ಸಮಯ ಸುಮಾರು 09:30 ಗಂಟೆಗೆ ನಾಡ ಕಡೆಯಿಂದ ತ್ರಾಸಿ ಕಡೆಗೆ ಒಂದು ಮಾರುತಿ ಓಮಿನಿ ಕಾರು ಬಂದಿದ್ದು ಪೊಲೀಸರು ತಡೆದು ನಿಲ್ಲಿಸಿ ಪರಿಶೀಲಿಸಿದಾಗ KA-20M-4837 ನೇ ಮಾರುತಿ ಓಮಿನಿ ವಾಹನದಲ್ಲಿ ಒಟ್ಟು 14 ಚೀಲಗಳಲ್ಲಿ ತುಂಬಿದ್ದ 700 ಕೆ.ಜಿ ಬೆಳ್ತಿಗೆ ಅಕ್ಕಿ ಸುಮಾರು 15,400/ರೂ ಮೌಲ್ಯ ದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಯಾರಿಂದಲೋ ಖರೀದಿಸಿ ಹೆಚ್ಚಿನ ಬೆಲೆಗೆ ಅಂಗಡಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದ ಅಕ್ಕಿಯನ್ನು ಸ್ವಾಧೀನಪಡಿಸಿಕೊಂಡು ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದ 1) ಕೋಡಿ ಅಶ್ರಪ್ ಬ್ಯಾರಿ, 2) ರಜಬ್ ಎಂಬವರನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದು ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.