download.jpeg
Spread the love

ಕಾಪು: ಸೆಪ್ಟೆಂಬರ್ 20 (ಹಾಯ್ ಉಡುಪಿ ನ್ಯೂಸ್) ಕಾಪು ಠಾಣಾ ವ್ಯಾಪ್ತಿಯ ಮಣಿಪುರ ಪೇಟೆಯ ಬಳಿಯಲ್ಲಿ ಗಾಂಜಾ ಅಮಲಿನಲ್ಲಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಕಾಪು ಪೊಲೀಸ್ ಠಾಣೆ ಪಿಎಸ್ಐ (ತನಿಖೆ) ಭರತೇಶ ಕಂಕಣವಾಡಿ ರವರು ದಿನಾಂಕ 17/09/2022 ರಂದು ಬೆಳಗ್ಗೆ ಸಮಯ 10:00 ಗಂಟೆಗೆ ಠಾಣಾ ಸಿಬ್ಬಂದಿಯೊಂದಿಗೆ ಇಲಾಖಾ ಮೋಟಾರು ಸೈಕಲ್‌ ನಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಠಾಣಾ ವ್ಯಾಪ್ತಿಯ ಮಣಿಪುರ ಗ್ರಾಮದ ಮಣಿಪುರ ಪೇಟೆಯ ಬಳಿ ಅನುಮಾನಾಸ್ಪದವಾಗಿ ಓರ್ವ ವ್ಯಕ್ತಿ ಕಂಡು ಬಂದಿದ್ದು, ಆತನನ್ನು ಪೊಲೀಸರು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಮಾದಕ ಸೇವನೆಯ ನಶೆಯಲ್ಲಿರುವ ಬಗ್ಗೆ ಅನುಮಾನಗೊಂಡು ಆತನನ್ನು ಬಂಧಿಸಿ, ವಶಕ್ಕೆ ಪಡೆದುಕೊಂಡು ಆತನನ್ನು ವಿಚಾರಿಸಿದಾಗ ಆತನು ತನ್ನ ಹೆಸರು ಮೊಹಮ್ಮದ್ ಆರೀಷ್ ಎಂದು ತಿಳಿಸಿದ್ದು , ಆತನನ್ನು ವೈದ್ಯಕೀಯ ಪರೀಕ್ಷೆಯ ಬಗ್ಗೆ ಪ್ರೊಫೆಸರ್ ಅಂಡ್ ಹೆಡ್ ಕೆ.ಎಂ.ಸಿ ಪೊರೆನ್ಸಿಕ್ ವಿಭಾಗ ಮಣಿಪಾಲ ಇವರ ಮುಂದೆ ಹಾಜರುಪಡಿದ್ದು, ಪರೀಕ್ಷಿಸಿದ ವೈದ್ಯರು ದಿನಾಂಕ 19/09/2022 ರಂದು ಮೊಹಮ್ಮದ್ ಆರೀಷ್ ಎಂಬಾತನು ಗಾಂಜಾ ಸೇವಿಸಿರುವ ಬಗ್ಗೆ ದೃಢಪತ್ರ ನೀಡಿದ್ದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಎನ್ ಡಿ ಪಿ ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.

error: No Copying!