ಬೆಂಗಳೂರು: ಸೆಪ್ಟೆಂಬರ್ 22 (ಹಾಯ್ ಉಡುಪಿ ನ್ಯೂಸ್) ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆ ನಿಷೇಧಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಗ್ರಹಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಉಗ್ರ ಚಟುವಟಿಕೆ ಬಗ್ಗೆ ತನಿಖೆ ಚುರುಕಾಗುತ್ತಿದ್ದಂತೆ ರಾಜ್ಯ ಸೇರಿ ಇಡೀ ದೇಶಾದ್ಯಂತ ಭಯೋತ್ಪಾದಕ ಚಟುವಟಿಕೆಗೆ ಹೊಂಚು ಹಾಕಿ ಕುಳಿತಿದ್ದ ಶಂಕಿತ ಉಗ್ರರೀರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದು ಕಡೆ ಇಂದು ಬೆಂಗಳೂರು, ಮಂಗಳೂರು ಸೇರಿದಂತೆ ದೇಶದಾದ್ಯಂತ 13 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಾಳಿ ನಡೆಸಿದೆ.
ಪಿಎಫ್ಐ ಮತ್ತು ಎಸ್ಡಿಪಿಐ ಕಚೇರಿಗಳ ಮೇಲೆ ದಾಳಿ ಮಾಡಿ ಸುಮಾರು 100ಕ್ಕೂ ಹೆಚ್ಚು ಪಿಎಫ್ಐ ನಾಯಕರು, ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಸುದ್ದಿಗೋಷ್ಠಿ ನಡೆಸಿದ್ದು ಪೂರಕ ಸಾಕ್ಷ್ಯ ಕಲೆ ಹಾಕಲಾಗಿದ್ದು ಸಂಘಟನೆ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕಾರ್ಯ ನಡೆಯುತ್ತಿದೆ, ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದಿದ್ದಾರೆ. ಶಿವಮೊಗ್ಗದಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಶಿವಮೊಗ್ಗ ಪೊಲೀಸರನ್ನು ಗ್ರಹ ಸಚಿವರು ಅಭಿನಂದಿಸಿದ್ದಾರೆ.