ಬೆಂಗಳೂರು: ಸೆಪ್ಟೆಂಬರ್ 28 (ಹಾಯ್ ಉಡುಪಿ ನ್ಯೂಸ್) ಕೇಂದ್ರ ಗ್ರಹ ಇಲಾಖೆ ದೇಶದಲ್ಲಿ ಪಿಎಫ್ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ನಿಷೇಧಿಸುವ ಮೂಲಕ ಮಹತ್ವದ ನಿರ್ಧಾರ ವನ್ನು ಕೈ ಗೊಂಡಿದೆ,ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ .ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಅವಕಾಶವಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಇಂದು ಹೇಳಿದರು.
ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ನಿಷೇಧಿತ ಸಂಘಟನೆಗಳೊಂದಿಗೆ ರಾಜ್ಯದ ಯಾರೂ ಸಂಪರ್ಕ ಯಾ ನಂಟನ್ನು ಇಟ್ಟುಕೊಳ್ಳಬಾರದೆಂದು ತಿಳಿಸಿದ್ದಾರೆ.’ಪಿಎಫ್ಐ ಸಂಘಟನೆಯ ಕೆಲವಾರು ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಈ ಸಂಘಟನೆ ಹಲವಾರು ವರ್ಷಗಳಿಂದ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. ಯುವಕರನ್ನು ದಾರಿ ತಪ್ಪಿಸಿ ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನೂ ನಡೆಸಿದೆ ಎಂದರು.
‘ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ರಾಜ್ಯದ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧ ಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿಪಿಎಂ ಎಲ್ಲರೂ ಕೂಡ ಪಿಎಫ್ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ಇತರ ರಾಜ್ಯಗಳು ಕೂಡ ಈ ಸಂಘಟನೆಗಳನ್ನು ನಿಷೇಧಿಸ ಬೇಕೆಂದು ಕೇಂದ್ರ ಕ್ಕೆ ಬೇಡಿಕೆ ಸಲ್ಲಿಸಿದ್ದವು ಎಂದು ಮುಖ್ಯ ಮಂತ್ರಿ ತಿಳಿಸಿದರು.