Spread the love

ಚೆನೈ: ಸೆಪ್ಟೆಂಬರ್ 29 (ಹಾಯ್ ಉಡುಪಿ ನ್ಯೂಸ್) ಕೇಂದ್ರ ಸರ್ಕಾರ ಐದು ವರ್ಷಗಳ ಅವಧಿಗೆ ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಸಂಘಟನೆಯನ್ನು ನಿಷೇಧಿಸಿದ ಆದೇಶದ ಬೆನ್ನಲ್ಲೇ ತಮಿಳುನಾಡು ಸರ್ಕಾರವು ಪಿಎಫ್ಐ ಹಾಗೂ ಅದರ ಸಹ ಸಂಸ್ಥೆಗಳನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಕ್ರಮ ಕೈಗೊಂಡಿದೆ. ಈ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದೆ.

ನಿಷೇಧದ ಬೆನ್ನಲ್ಲೇ ಪಿಎಫ್ಐ ಕಚೇರಿಗಳಿಗೆ ಬೀಗ ಹಾಕಿ ಮೊಹರು ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

error: No Copying!