Spread the love

ಮುಂಬೈ : ಅಕ್ಟೋಬರ್ 7 (ಹಾಯ್ ಉಡುಪಿ ನ್ಯೂಸ್) ಸುಮಾರು  ₹ 100 ಕೋಟಿಗೂ ಅಧಿಕ ಮೌಲ್ಯದ 16 ಕೆ.ಜಿ ಹೆರಾಯಿನ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವನಿಂದ ವಶಪಡಿಸಿಕೊಂಡಿದ್ದಾರೆ .

ಕತಾರ್ ಮೂಲಕ ಮುಂಬೈಗೆ ಪ್ರಯಾಣ ಮಾಡುತ್ತಿದ್ದ ಆಫ್ರಿಕಾದ ಮಲಾವಿಯ ಪ್ರಯಾಣಿಕನೊಬ್ಬನು ಮಾದಕ ವಸ್ತು ವನ್ನು ಕಳ್ಳಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಡಿಆರ್‌ಐನ ಮುಂಬೈ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿ ಕಳ್ಳ ಸಾಗಾಣಿಕೆ ದಾರನನ್ನು ಬಂಧಿಸಿದ್ದಾರೆ.

ತಪಾಸಣೆ ವೇಳೆ ಟ್ರಾಲಿ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 16 ಕೆಜಿ ಹೆರಾಯಿನ್ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ವಶಪಡಿಸಿಕೊಂಡಿರುವ ಹೆರಾಯಿನ್‌ನ ಬೆಲೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ₹100 ಕೋಟಿಗೂ ಅಧಿಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿಯ ಹೋಟೆಲ್ ಒಂದರಲ್ಲಿ ತಂಗಿದ್ದ ಘಾನಾದ ಮಹಿಳೆಯೊಬ್ಬಳನ್ನು ಪೋಲಿಸರು ಬಂಧಿಸಿದ್ದಾರೆ. ಈ ಹೆರಾಯಿನ್ ಪಡೆಯಲು ಈಕೆ ಹೋಟೆಲ್ ನಲ್ಲಿ ತಂಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.ಈಕೆಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ಮುಂಬೈಗೆ ಕರೆ ತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

error: No Copying!