Spread the love

ಉತ್ತರ ಪ್ರದೇಶ: ಅಕ್ಟೋಬರ್ 19(ಹಾಯ್ ಉಡುಪಿ ನ್ಯೂಸ್) ಉತ್ತರ ಪ್ರದೇಶದ  ಅಜಂಗಢದಲ್ಲಿ 8 ವರ್ಷದ ಪುಟ್ಟ ಬಾಲಕಿಯನ್ನು ಆಕೆಯ ನೆರೆ ಮನೆಯ ಪಾಪಿ ಯುವಕನೋರ್ವ ಅತ್ಯಾಚಾರಗೈದು, ಕೊಲೆ ಮಾಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಬಾಲಕಿಯ ನೆರೆ ಮನೆಯ ನಿವಾಸಿ ಯುವಕ ಲಕ್ಷ್ಮಣ ಎಂಬಾತ ಈ ಕುಕ್ರತ್ಯ ನಡೆಸಿದ್ದು ಈ ಬಗ್ಗೆ ಸಾಕ್ಷ್ಯ ಗಳು ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಯುವಕ ಹಿಟ್ಟಿನ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದು ಡ್ರಗ್ಸ್ ಸೇವನೆಯ ಚಟ ಹೊಂದಿದ್ದ ಎನ್ನಲಾಗಿದೆ. ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಬಾಲಕಿಗೆ ಚಾಕಲೇಟ್ ಕೊಡಿಸುವ ನೆಪದಲ್ಲಿ ಮನೆಯಿಂದ ದೂರದಲ್ಲಿರುವ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರ ಮಾಡಿ ಬಳಿಕ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆಂದು ತನಿಖೆಯ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಈ ಬಗ್ಗೆ ಘಟನಾ ಸ್ಥಳದಲ್ಲಿಯೂ ಸಾಕ್ಷಿ ಲಭಿಸಿದೆ ಎಂದು ಎಸ್ಪಿ ಅನುರಾಗ್ ಆರ್ಯ ಹೇಳಿದ್ದಾರೆ. ಬಾಲಕಿ ಮನೆಯಲ್ಲಿ ಇಲ್ಲದಿರುವುದನ್ನು ಗಮನಿಸಿದ ಹೆತ್ತವರು ಮಗುವನ್ನು ಹುಡುಕಲು ಪ್ರಾರಂಭಿಸಿದ್ದಾರೆ. ಕೊನೆಗೆ ನಿರ್ಜನ ಸ್ಥಳವೊಂದರಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೂಡಲೇ ಸಾಕ್ಷ್ಯ ಸಂಗ್ರಹಿಸಿ ಆರೋಪಿಯನ್ನು ಬಂಧಿಸಿದ್ದಾರೆ.

error: No Copying!