- ಕಾರ್ಕಳ: ನವೆಂಬರ್ 14 (ಹಾಯ್ ಉಡುಪಿ ನ್ಯೂಸ್) ಕುಕ್ಕುಂದೂರು ಗ್ರಾಮದ ಅಯ್ಯಪ್ಪ ನಗರದಲ್ಲಿ ಅಂದರ್ ಬಾಹರ್ ಜುಗಾರಿ ಆಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
- ಕಾರ್ಕಳ ನಗರ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಪ್ರಸನ್ನ ಎಂ.ಎಸ್ ಇವರು ದಿನಾಂಕ 13-11-2022 ರಂದು ಸಿಬ್ಬಂದಿಯವರೊಂದಿಗೆ ಗಸ್ತಿನಲ್ಲಿದ್ದಾಗ ಠಾಣಾ ಸರಹದ್ದಿನ ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರ ಪಾದೆ ಬಳಿ ಹಾಡಿಯ ಸರಕಾರಿ ಸ್ಥಳದಲ್ಲಿ ಕೆಲವು ವ್ಯಕ್ತಿಗಳು ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳನ್ನು ಉಪಯೋಗಿಸಿ ಅಂದರ್‌ಬಾಹರ್ ಜುಗಾರಿ ಆಟ ಆಡುತ್ತಿದ್ದಾರೆ ಎಂಬುವುದಾಗಿ ಸಾರ್ವಜನಿಕರಿಂದ ಮಾಹಿತಿ ಬರುತ್ತದೆ.
- ಕೂಡಲೇ ಅಲ್ಲಿಗೆ ದಾಳಿ ನಡೆಸಿದ ಪೊಲೀಸರು ಅಂದರ್ ಬಾಹರ್ ಜುಗಾರಿ ಆಟವನ್ನು ಆಡುತ್ತಿದ್ದ 1) ಉಮೇಶ (32) ವಾಸ: ನಿಜಮುಂಡೆ, ಗರಡಿ ರೋಡ್, ಕುಕ್ಕುಂದೂರು ಗ್ರಾಮ, ಕಾರ್ಕಳ ತಾಲೂಕು, 2) ಸುರೇಶ (24) ಜಾರ್ಕಳ ಶಾಂತಿಪಲ್ಕೆ, ಎರ್ಲಪಾಡಿ ಗ್ರಾಮ, ಕಾರ್ಕಳ ತಾಲೂಕು, 3) ಪ್ರಜ್ವಲ್ (25) ಶಂಕರಬೆಟ್ಟು, ಕುಕ್ಕುಂದೂರು ಗ್ರಾಮ, ಕಾರ್ಕಳ ತಾಲೂಕು ಎಂಬವರನ್ನು ಬಂಧಿಸಿ ವಶಕ್ಕೆ ಪಡೆದಿದ್ದು ಉಳಿದ 4 ಜನ ಸ್ಥಳದಿಂದ ಓಡಿ ಹೋಗಿರುತ್ತಾರೆ . ಇವರು ಜುಗಾರಿ ಆಟಕ್ಕೆ ಬಳಸಿದ ನಗದು ರೂಪಾಯಿ 3600/-, 52 ಇಸ್ಪೀಟ್‌ಎಲೆಗಳು, ಹಳೆಯ ದಿನಪತ್ರಿಕೆ -1 ನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.