Spread the love

ಬೆಂಗಳೂರು: ನವೆಂಬರ್ 15 (ಹಾಯ್ ಉಡುಪಿ ನ್ಯೂಸ್) ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆಯಲಿರುವ ಉಡುಪಿ ಜಿಲ್ಲಾ ಕನ್ನಡ ಸಮಾವೇಶದ ಬಗ್ಗೆ ಚರ್ಚಿಸಲು ಉಡುಪಿ ಜಿಲ್ಲಾ ಘಟಕದ ಪ್ರಮುಖರು ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡರನ್ನು ಭೇಟಿಯಾದರು.

ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷರಾದ ಸುಜಯ ಪೂಜಾರಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯಕ್ ರವರ ಉಪಸ್ಥಿತಿಯಲ್ಲಿ ಜಿಲ್ಲಾ ಸಲಹೆಗಾರರಾದ ಉದಯ ಸೇರಿಗಾರ್ ರವರು ರಾಜ್ಯಾಧ್ಯಕ್ಷರಿಗೆ ಹೂ ಗುಚ್ಛ ನೀಡಿ ಗೌರವಿಸಿದರು.

ಉಡುಪಿ ಜಿಲ್ಲಾ ಸಂಘಟನೆಯನ್ನು ಬಲಗೊಳಿಸುವ ಬಗ್ಗೆ ಹಾಗೂ ಉಡುಪಿ ಜಿಲ್ಲಾ ಕನ್ನಡ ಸಮಾವೇಶದ ಬಗ್ಗೆ ರಾಜ್ಯಾಧ್ಯಕ್ಷ ರಾದ ಟಿ.ಎ.ನಾರಾಯಣ ಗೌಡರೊಂದಿಗೆ ಚರ್ಚಿಸಲಾಯಿತು ಎಂದು ಉಡುಪಿ ಜಿಲ್ಲಾ ಅಧ್ಯಕ್ಷರಾದ ಸುಜಯ ಪೂಜಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

error: No Copying!