Spread the love

ಉಡುಪಿ: ದಿನಾಂಕ 11-12-2022 (ಹಾಯ್ ಉಡುಪಿ ನ್ಯೂಸ್) ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಮತ್ತು ತಾಲೂಕು ಅಧ್ಯಕ್ಷರುಗಳ ಮಾಸಿಕ ಸಭೆಯು ದಿನಾಂಕ 9-12-2022 ರಂದು ನಡೆಯಿತು.

ಸಭೆಯಲ್ಲಿ”ಕನ್ನಡ ಡಿಂಡಿಮ” ಕನ್ನಡ ಸಮಾವೇಶದ ಬಗ್ಗೆ ಚರ್ಚಿಸಲಾಯಿತು. ಹಾಗೂ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣ ಗೌಡರ ಆದೇಶದ ಮೇರೆಗೆ, ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರು ನೂತನ ಮಹಿಳಾ ಜಿಲ್ಲಾಧ್ಯಕ್ಷರಾಗಿ ಗೀತಾ ಪಾಂಗಾಳ, ಕಾಪು ತಾಲೂಕು ಅಧ್ಯಕ್ಷರಾಗಿ ಆನಂದ್ ಶೆಟ್ಟಿ, ಕಾಪು ತಾಲೂಕು ಮಹಿಳಾ ಅಧ್ಯಕ್ಷರಾಗಿ ಶಶಿಕಲಾ ನವೀನ್ ರವರುಗಳನ್ನು ಆಯ್ಕೆ ಮಾಡಿದರು .‌

ಈ ಸಂಧರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ರಾಘವೆಂದ್ರ ನಾಯಕ್, ಜಿಲ್ಲಾ ಸಲಹೆಗಾರರಾದ ಲಕ್ಷ್ಮೀಶ್ ಶೆಟ್ಟಿ, ಜಿಲ್ಲಾ ಮಹಿಳಾ ಸಲಹೆಗಾರರಾದ ಸುನಂದ ಕೋಟ್ಯಾನ್, ಜಿಲ್ಲಾ ಕಾನೂನು ಸಲಹೆಗಾರರಾದ ದೀಪಿಕಾ, ಜಿಲ್ಲಾ ಉಪಾಧ್ಯಕ್ಷರಾದ ಕುಶಲ್ ಅಮೀನ್, ಬೃಹ್ಮಾವರ ತಾಲೂಕು ಅಧ್ಯಕ್ಷರಾದ ಫ್ರ್ಯಾಂಕಿ ಡಿ’ಸೋಜ ಕೊಳಲಗಿರಿ, ಬೃಹ್ಮಾವರ ತಾಲೂಕು ಮಹಿಳಾ ಅಧ್ಯಕ್ಷೆ ದೇವಕೀ ಬಾರ್ಕೂರು, ಉಡುಪಿ ತಾಲೂಕು ಅಧ್ಯಕ್ಷರಾದ ಅರಾ ಪ್ರಭಾಕರ್ ರಾಜ್ ಪೂಜಾರಿ, ಉಡುಪಿ ತಾಲೂಕು ಮಹಿಳಾ ಅಧ್ಯಕ್ಷೆ ಮಮತಾ ಉಪಸ್ಥಿತರಿದ್ದರು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

error: No Copying!