- ಹಿರಿಯಡ್ಕ: ದಿನಾಂಕ 26-12-2022(ಹಾಯ್ ಉಡುಪಿ ನ್ಯೂಸ್) ಹಿರಿಯಡ್ಕದ ಸಂತೆ ಮಾರುಕಟ್ಟೆ ಬಳಿಯಲ್ಲಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ
- ಹಿರಿಯಡ್ಕ ಪೊಲೀಸ್ ಠಾಣೆ , ಪೊಲೀಸ್ ಉಪ ನಿರೀಕ್ಷಕರಾದ ಅನಿಲ್ ಬಿ ಮಾದರ ಅವರಿಗೆ ದಿನಾಂಕ ೨೩/೧೨/೨೦೨೨ ರಂದು ಉಡುಪಿ ತಾಲೂಕು ಬೊಮ್ಮರಬೆಟ್ಟು ಗ್ರಾಮದ ಹಿರಿಯಡ್ಕ ಸಂತೆ ಮಾರ್ಕೆಟ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿರುವುದಾಗಿ ಸಾರ್ವಜನಿಕರಿಂದ ದೊರೆತ ಖಚಿತ ಮಾಹಿತಿ ಮೇರೆಗೆ ಆ ಸ್ಥಳಕ್ಕೆ ದಾಳಿ ನಡೆಸಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಉಡುಪಿ ತಾಲೂಕು, ಕುಕ್ಕೆ ಹಳ್ಳಿ ಗ್ರಾಮದ ಮೂಡು ತಂಗಾಣ ಮನೆ ನಿವಾಸಿ ಪ್ರಶಾಂತ್ ಕುಲಾಲ (27) ಎಂಬಾತನನ್ನು ವಶಕ್ಕೆ ಪಡೆದು ಆತ ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ ನಗದು ರೂಪಾಯಿ 3,100/- ಮತ್ತು ಮಟ್ಕಾ ನಂಬ್ರ ಬರೆದ ಚೀಟಿ- 1, ಬಾಲ್ ಪೆನ್ ಸ್ವಾಧೀನಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.