ಮಣಿಪಾಲ: ದಿನಾಂಕ 03/01/2023 (ಹಾಯ್ ಉಡುಪಿ ನ್ಯೂಸ್) ಮಣಿಪಾಲದ ಹೊಟೇಲ್ ಒಂದರಲ್ಲಿ ಅಕ್ರಮವಾಗಿ ಮದ್ಯಪಾನಕ್ಕೆ ಅವಕಾಶ ಮಾಡಿಕೊಟ್ಟ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಸುಧಾಕರ ತೋನ್ಸೆ ಅವರು ದಿನಾಂಕ 02-01-2023 ರಂದು ಠಾಣಾ ಸಿಬ್ಬಂದಿಯವರೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಸಂಜೆ 4:00 ಗಂಟೆಗೆ 80 ಬಡಗಬೆಟ್ಟು ಗ್ರಾಮದ ಅಲೆವೂರು ರಸ್ತೆಯ ಬಾಳಿಗ ಟವರ್ಸ್ ಕಟ್ಟಡದಲ್ಲಿರುವ ರಿಂಗ್ ಝೋನ್ ಹೋಟೆಲ್ ಮತ್ತು ರೆಸ್ಟೋರೆಂಟ್ ಎಂಬಲ್ಲಿ ಪ್ರಜ್ವಲ್ ಎಂಬಾತ ಮದ್ಯಪಾನ ಸೇವಿಸಲು ಅನುಮತಿ ಇಲ್ಲದೇ ಇದ್ದರೂ ಸಹ ಸಾರ್ವಜನಿಕರಿಗೆ ಮದ್ಯ ಸೇವನೆ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿರುವುದಾಗಿ ಸಾರ್ವಜನಿಕರಿಂದ ಬಂದ ಮಾಹಿತಿಯಂತೆ ಪೊಲೀಸ್ ಸಿಬ್ಬಂದಿ ಗಳೊಂದಿಗೆ ಸ್ಥಳಕ್ಕೆ ಹೋಗಿ ನೋಡಿದಾಗ ರಿಂಗ್ ಝೋನ್ ಹೋಟೆಲ್ ಮತ್ತು ರೆಸ್ಟೋರೆಂಟ್ ನ ಒಳಗಡೆ ಮದ್ಯಪಾನ ಮಾಡುತ್ತಿರುವುದನ್ನು ಕಂಡು ಪೊಲೀಸರು ದಾಳಿ ಮಾಡಿದ್ದು, ಮದ್ಯಪಾನ ಸೇವನೆ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ಆತನನ್ನು ವಿಚಾರಣೆ ನಡೆಸಿದಾಗ ತನ್ನ ಹೆಸರು ಸುಶಾಂತ್ (18) ಎಂಬುದಾಗಿ ಪೊಲೀಸರಿಗೆ ತಿಳಿಸಿರುತ್ತಾನೆ. ಹಾಗೂ ಮದ್ಯಪಾನ ಮಾಡಲು ಅವಕಾಶ ಮಾಡಿಕೊಟ್ಟ ವ್ಯಕ್ತಿ ಪ್ರಜ್ವಲ್ (20) ಎಂಬುದಾಗಿದ್ದು ಇಬ್ಬರನ್ನೂ ಪೊಲೀಸರು ಬಂಧಿಸಿದ್ದು ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ .