ಮಣಿಪಾಲ: ದಿನಾಂಕ 12-01-2023(ಹಾಯ್ ಉಡುಪಿ ನ್ಯೂಸ್) ಮಣಿಪಾಲದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರಾದ ಸುಧಾಕರ್ ತೋನ್ಸೆ ಇವರು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ವಿ ಪಿ ನಗರದ ಬಳಿ ಸಾರ್ವಜನಿಕ ಸ್ಥಳದಲ್ಲಿ ದಿನಾಂಕ 09-01-2023 ರಂದು ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ಅಬ್ದುಲ್ ರವೂಫ್ (23) ಎಂಬಾತನನ್ನು ವಶಕ್ಕೆ ಪಡೆದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು, ವೈದ್ಯಾಧಿಕಾರಿಗಳು ದಿನಾಂಕ 12/01/2023 ರಂದು ಅಬ್ದುಲ್ ರವೂಫ್ ಗಾಂಜಾ ಸೇವನೆ ಮಾಡಿರುವುದನ್ನು ದೃಢಪತ್ರವನ್ನು ನೀಡಿರುತ್ತಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ 10/2023, ಕಲಂ: 27(b) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ.