- ಕೊಲ್ಲೂರು: ದಿನಾಂಕ 31-01-2023 (ಹಾಯ್ ಉಡುಪಿ ನ್ಯೂಸ್) ಮುದೂರು ಗ್ರಾಮದಲ್ಲಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಇಬ್ಬರು ಯುವಕರನ್ನು ಕೊಲ್ಲೂರು ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಮಹೇಶ ಕಂಬಿ ಯವರು ಬಂಧಿಸಿದ್ದಾರೆ.
- ಕೊಲ್ಲೂರು ಪೊಲೀಸ್ ಠಾಣೆ, ಪೊಲೀಸ್ ಉಪ ನಿರೀಕ್ಷಕ (ಪ್ರಭಾರ) ರಾದ ಮಹೇಶ ಕಂಬಿ ಯವರಿಗೆ ದಿನಾಂಕ 30-01-2023 ರಂದು ಬೈಂದೂರು ತಾಲೂಕು ಮುದೂರು ಗ್ರಾಮದ ಮುದೂರು,ಉದಯ ನಗರದ ಬಳಿ ಓರ್ವ ಮತ್ತು ಮೈದಾನದ ಐದು ಬಳಿ ಓರ್ವ ವ್ಯಕ್ತಿ ಗಾಂಜಾ ಸೇವನೆ ಮಾಡುತ್ತಿರುವುದಾಗಿ ಸಾರ್ವಜನಿಕರಿಂದ ಬಂದ ಮಾಹಿತಿಯಂತೆ ಸ್ಥಳಕ್ಕೆ ಹೋದಾಗ ಅಲ್ಲಿ ಇಬ್ಬರು ವ್ಯಕ್ತಿಗಳು ಅಮಲಿನಲ್ಲಿರುವುದು ಕಂಡುಬಂದಿದ್ದು, ಅವರನ್ನು ಪೊಲೀಸರು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರು ಮಾದಕ ವಸ್ತು ಸೇವನೆ ಮಾಡಿರುವ ಅನುಮಾನ ಬಂದ ಮೇರೆಗೆ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಿಸಿದ್ದು ಒಬ್ಬಾತ ತನ್ನ ಹೆಸರು ರೆನ್ಸ್ (28)ಎಂಬುದಾಗಿ ಹಾಗೂ ಇನ್ನೋರ್ವ ವಿನೀಶ್ (25) ಎಂದು ತಿಳಿಸಿರುತ್ತಾರೆ. ಅವರನ್ನು ವೈದ್ಯಕೀಯ ತಪಾಸಣೆ ಬಗ್ಗೆ ಕುಂದಾಪುರ ಶ್ರೀಮಾತಾ ಆಸ್ಪತ್ರೆಯ ವೈಧ್ಯಾಧಿಕಾರಿ ರವರ ಮುಂದೆ ಹಾಜರುಪಡಿಸಿದ್ದು, ಅವರನ್ನು ಪರೀಕ್ಷಿಸಿದ ವೈದ್ಯರು ಈರ್ವರು ಗಾಂಜಾ ಸೇವಿಸಿರುವುದು ದೃಢಪಟ್ಟಿರುವುದಾಗಿ ವರದಿ ನೀಡಿದ್ದು ,ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ 27(B) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ.