ಉಡುಪಿ: ದಿನಾಂಕ 3-02-2023(ಹಾಯ್ ಉಡುಪಿ ನ್ಯೂಸ್) ಮಣಿಪಾಲ ಪರಿಸರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ವ್ಯಕ್ತಿ ಯನ್ನು ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ತಾಲೂಕು, ಶಿವಳ್ಳಿ ಗ್ರಾಮದ ರಾಯಲ್ ಎಂಬೆಸ್ಸಿ ಅಪಾರ್ಟ್‌ಮೆಂಟ್ ಬಳಿ ದಿನಾಂಕ 31-01-2023ರಂದು ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತುವನ್ನು ಸೇವಿಸಿರುವಂತೆ ಕಂಡು ಬಂದ ಓರ್ವ ವ್ಯಕ್ತಿಯನ್ನು ಸೆನ್ ಪೊಲೀಸ್ ಠಾಣೆಯ ಸಿಬ್ಬಂದಿ ಬೆಳಿಗ್ಗೆ 10:30 ಗಂಟೆಗೆ ವಶಕ್ಕೆ ಪಡೆದು ಸೆನ್ ಠಾಣೆಗೆ ಹಾಜರುಪಡಿಸಿದ್ದು, ಪೊಲೀಸ್ ನಿರೀಕ್ಷಕರು ಆ ವ್ಯಕ್ತಿ ಯನ್ನು ಮೆಡಿಕಲ್ ತಪಾಸಣೆ ಗೊಳಪಡಿಸಿರುತ್ತಾರೆ.
ದಿನಾಂಕ 03.02.2023 ರಂದು ಅಶೋಕ, ಪೊಲೀಸ್ ಉಪನಿರೀಕ್ಷಕರು, ಸೆನ್ ಅಪರಾಧ ಪೊಲೀಸ್ ಠಾಣೆ, ಉಡುಪಿ ರವರು ಮಣಿಪಾಲ ಕೆ.ಎಂ.ಸಿ. ಫಾರೆನ್ಸಿಕ್ ವಿಭಾಗದಿಂದ ಬಂದಿರುವ ತಜ್ಞರ ವರದಿಯನ್ನು ಸ್ವೀಕರಿಸಿ, ವರದಿಯಲ್ಲಿ ಆರೋಪಿಯು ಗಾಂಜಾ ಸೇವನೆ ಮಾಡಿರುವುದು ಖಚಿತಪಟ್ಟಿರುವುದರಿಂದ ಆತನ ವಿರುದ್ಧ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ 27 (b) ಎನ್.ಡಿ.ಪಿ.ಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಿಸಲಾಗಿದೆ.