ಬೈಂದೂರು: ದಿನಾಂಕ:10-02-2023 (ಹಾಯ್ ಉಡುಪಿ ನ್ಯೂಸ್) ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರೂರಿನಲ್ಲಿ ಗಾಂಜಾ ಸೇವನೆ ಮಾಡಿದ್ದ ಯುವಕನನ್ನು ಬೈಂದೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬೈಂದೂರು ಪೊಲೀಸ್ ಠಾಣೆ, ಪೊಲೀಸ್ ಉಪನಿರೀಕ್ಷಕರಾದ, ನಿರಂಜನ್ ಗೌಡ ಬಿ ಎಸ್ ಇವರಿಗೆ ದಿನಾಂಕ 09/02/2023 ರಂದು ಬೈಂದೂರು ಠಾಣಾ ವ್ಯಾಪ್ತಿಯ ಶಿರೂರು ಮಾರ್ಕೇಟ್ ಬಳಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಸಾರ್ವಜನಿಕ ಸ್ಥಳದಲ್ಲಿ ತೂರಾಡಿಕೊಂಡಿದ್ದ ಶೇಖ್ ಶಹದಾಬ್ (28) ಎಂಬಾತನನ್ನು ಮಾದಕವಸ್ತು ಸೇವಿಸಿರುವ ಸಂದೇಹದ ಮೇಲೆ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಯ ಬಗ್ಗೆ ವೈದ್ಯಾಧಿಕಾರಿಗಳು ಶ್ರೀ ಮಾತಾ ಆಸ್ಪತ್ರೆ ಕುಂದಾಪುರ ರವರ ಮುಂದೆ ಹಾಜರು ಪಡಿಸಿದ್ದು ಆತನನ್ನು ಪರೀಕ್ಷಿಸಿದ ವೈದ್ಯಾಧಿಕಾರಿಯವರು ಶೇಖ್ ಸಹದಾಬ್ ಗಾಂಜಾ ಸೇವಿಸಿರುವುದನ್ನು ದೃಢ ಪಡಿಸಿದ್ದಾರೆ . ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ .