ಶಿರ್ವಾ: ದಿನಾಂಕ 16-02-2023 (ಹಾಯ್ ಉಡುಪಿ ನ್ಯೂಸ್) ಶಿರ್ವ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ಶಿರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಶಿರ್ವ ಪೊಲೀಸ್ ಠಾಣೆ, ಪೊಲೀಸ್ ಉಪನಿರೀಕ್ಷಕರಾದ ಅನಿಲ್ ಕುಮಾರ್ ಅವರಿಗೆ ದಿನಾಂಕ 15-02-2023 ರಂದು ಶಿರ್ವ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿ ಯೋರ್ವ ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಿರುವುದಾಗಿ ಸಾರ್ವಜನಿಕರಿಂದ ಬಂದ ಮಾಹಿತಿಯಂತೆ ಅನಿಲ್ ಕುಮಾರ್ ಅವರು ಪೊಲೀಸ್ ಸಿಬ್ಬಂದಿ ಗಳೊಂದಿಗೆ ದಾಳಿ ನಡೆಸಿ ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹ ಮಾಡುತ್ತಿದ್ದ ರಮೇಶ ಪೂಜಾರಿ (47), ವಾಸ: ಮನೆ ನಂಬ್ರ 4-171,ತಿರ್ಲಪಲ್ಕೆ,ಪಡುಬೆಳ್ಳೆ, ಬೆಳ್ಳೆ ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ ಎಂಬಾತನನ್ನು ಬಂಧಿಸಿ ಆತನಿಂದ ನಗದು ಹಣ 850/- , ಮಟ್ಕಾ ಚೀಟಿ -1, ಬಾಲ್‌ಪೆನ್-1 ನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಕಲಂ: 78(3) KP ACT ರಂತೆ ಪ್ರಕರಣ ದಾಖಲಾಗಿರುತ್ತದೆ.