ಕೊಲ್ಲೂರು: ದಿನಾಂಕ:18-02-2023(ಹಾಯ್ ಉಡುಪಿ ನ್ಯೂಸ್) ಕೊಲ್ಲೂರು ಗ್ರಾಮದಲ್ಲಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಯುವಕನೋರ್ವನನ್ನು ಕೊಲ್ಲೂರು ಠಾಣೆಯ ಪೊಲೀಸರು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆ ಪಿಎಸ್ಐ ಈರಣ್ಣ ಶಿರಗುಂಪಿ ಅವರು ದಿನಾಂಕ 16–02-2023 ರಂದು ಕೊಲ್ಲೂರು ದೇವಸ್ಥಾನದಲ್ಲಿ ಬಂದೋಬಸ್ತ್ ಕರ್ತವ್ಯದಲ್ಲಿರುವಾಗ ಸಾರ್ವಜನಿಕರೊಬ್ಬರು ಕರೆ ಮಾಡಿ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಬಳಿ ಓರ್ವ ವ್ಯಕ್ತಿ ಗಾಂಜಾ ಸೇವನೆ ಮಾಡುತ್ತಿರುವುದಾಗಿ ಮಾಹಿತಿ ನೀಡಿದ್ದು ,ಕೂಡಲೇ ಠಾಣಾ ಸಿಬ್ಬಂದಿ ಎ.ಎಸ್.ಐ ರವೀಶ ಹೊಳ್ಳ, ಪಿ.ಸಿ. ಪ್ರಶಾಂತ ಹಾಗೂ ಇಲಾಖಾ ಜೀಪು ಚಾಲಕ ಎಪಿಸಿ ನಾಗರಾಜ ರವರೊಂದಿಗೆ ಮಾಹಿತಿ ಬಂದ ಸ್ಥಳಕ್ಕೆ ಹೋದಾಗ ಅಲ್ಲಿ ಒಬ್ಬವ್ಯಕ್ತಿಯು ಅಮಲಿನಲ್ಲಿರುವುದು ಕಂಡು ಬಂದಿದ್ದು, ಆತನನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಆತನು ಮಾದಕ ವಸ್ತು ಸೇವನೆ ಮಾಡಿರುವ ಅನುಮಾನ ಬಂದ ಮೇರೆಗೆ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ
ತನ್ನ ಹೆಸರು ಗಣಪತಿ ಭಟ್(29 ವರ್ಷ) ವಾಸ: ದಳಿ ಕೊಲ್ಲೂರು ಗ್ರಾಮ ಬೈಂದೂರು ತಾಲೂಕು ಉಡುಪಿ ಜಿಲ್ಲೆ ಎಂಬುದಾಗಿ ತಿಳಿಸಿರುತ್ತಾನೆ. ಆತನು ಗಾಂಜಾ ದಂತಹ ಅಮಲು ಪದಾರ್ಥ ಸೇವಿಸಿರುವ ಬಗ್ಗೆ ಅನುಮಾನ ಬಂದ ಮೇರೆಗೆ ಆತನನ್ನು ವಶಕ್ಕೆ ತೆಗೆದುಕೊಂಡು ವೈದ್ಯಕೀಯ ತಪಾಸಣೆ ಬಗ್ಗೆ ಕುಂದಾಪುರ ಶ್ರೀಮಾತಾ ಆಸ್ಪತ್ರೆಯ ವೈಧ್ಯಾಧಿಕಾರಿ ರವರ ಮುಂದೆ ಹಾಜರುಪಡಿಸಿದ್ದು, ಆತನನ್ನು ಪರೀಕ್ಷಿಸಿದ ವೈದ್ಯರು ಆತನು ಗಾಂಜಾ ಸೇವಿಸಿರುವುದು ದೃಢಪಟ್ಟಿರುವುದಾಗಿ ವರದಿ ನೀಡಿರುತ್ತಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಕಲಂ:27(b) NDPS Act ರಂತೆ ಪ್ರಕರಣ ದಾಖಲಿಸಲಾಗಿದೆ.