Spread the love

ಬೆಂಗಳೂರು: ದಿನಾಂಕ 3-03-2023 (ಹಾಯ್ ಉಡುಪಿ ನ್ಯೂಸ್) ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ(ಕೆಎಸ್ ಡಿಎಲ್) ರಾಸಾಯನಿಕ ಪೂರೈಸುವ ಟೆಂಡರ್ ಪ್ರಕ್ರಿಯೆಯಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ₹40 ಲಕ್ಷ‌ ಲಂಚ ಪಡೆದ ಕಾರ್ಖಾನೆಯ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮಾಡಾಳ್ ರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.ಪ್ರಶಾಂತ್ ಮಾಡಾಳ್ ಬೆಂಗಳೂರು ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ .

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ಪ್ರಶಾಂತ್, ನಿಯೋಜನೆ ಮೇಲೆ ಬೆಂಗಳೂರು ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ. ಅವರು ಹೊಂದಿರುವ ಖಾಸಗಿ ಕಚೇರಿಯೊಂದರಲ್ಲಿ‌ ಸಂಜೆ 6.45ಕ್ಕೆ ಲಂಚದ ಹಣ ಪಡೆಯುವಾಗ ಬಂಧಿಸಲಾಗಿದೆ‌.

ತಂದೆ ಮಾಡಾಳ್ ವಿ಼ರೂಪಾಕ್ಷಪ್ಪ ರ ಪರವಾಗಿ ಲಂಚದ ಹಣ ಸ್ವೀಕರಿಸುತ್ತಿದ್ದಾಗ ದಾಳಿಮಾಡಿದ ಲೋಕಾಯುಕ್ತ ಬೆಂಗಳೂರು ನಗರ ಘಟಕದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಕೆಎಸ್‌ಡಿಎಲ್‌ಗೆ ರಾಸಾಯನಿಕ ಪೂರೈಕೆಗೆ ಆಯ್ಕೆಯಾಗಿರುವ ಗುತ್ತಿಗೆದಾರರಿಂದ ಮಾಡಾಳ್ ವಿರೂಪಾಕ್ಷಪ್ಪ ₹81 ಲಕ್ಷ‌ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಹಣವನ್ನು ಮಗನಿಗೆ ತಲುಪಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದರು ಎಂದು ಲೋಕಾಯುಕ್ತದ ಮೂಲಗಳು ತಿಳಿಸಿವೆ.

error: No Copying!