ಬೆಂಗಳೂರು: ದಿನಾಂಕ 03-03-2023 (ಹಾಯ್ ಉಡುಪಿ ನ್ಯೂಸ್) ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್)ಯ ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದ ಲಂಚ ಪ್ರಕರಣದಲ್ಲಿ ಬಂಧಿತನಾಗಿರುವ ಚನ್ನಗಿರಿ ಶಾಸಕನ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ 6 ಕೋಟಿ ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ.
ಕೆಎಸ್ ಡಿಎಲ್ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಅವರನ್ನು 40 ಲಕ್ಷ ಲಂಚ ಪಡೆಯುತ್ತಿದ್ದಾಗ ಗುರುವಾರ ಸಂಜೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಅವರ ಖಾಸಗಿ ಕಚೇರಿಯಲ್ಲಿ ಇನ್ನೂ 1.62 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು.