Spread the love

ಬ್ರಹ್ಮಾವರ: ದಿನಾಂಕ 16/03/2023 (ಹಾಯ್ ಉಡುಪಿ ನ್ಯೂಸ್) ಬ್ರಹ್ಮಾವರ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಬ್ರಹ್ಮಾವರ ಪೊಲೀಸ್‌ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಮಹಾಂತೇಶ ಉದಯ ನಾಯಕ್ ಇವರು ದಿನಾಂಕ 15-03-2023ರಂದು ರೌಂಡ್ಸ್‌ ಕರ್ತವ್ಯದಲ್ಲಿರುವಾಗ  ಬ್ರಹ್ಮಾವರ ತಾಲೂಕು ವಾರಂಬಳ್ಳಿ ಗ್ರಾಮದ ಬ್ರಹ್ಮಾವರ ಬಸ್ಸು ನಿಲ್ದಾಣದ, ಸಾರ್ವಜನಿಕರ ಶೌಚಾಯಲಯದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಯುತ್ತಿರುವುದಾಗಿ ಬಂದ ಸಾರ್ವಜನಿಕ ಮಾಹಿತಿಯಂತೆ  ಕೂಡಲೇ ಸ್ಥಳಕ್ಕೆ ದಾಳಿ ನಡೆಸಿದಾಗ, ಸಾರ್ವಜನಿಕರು ಅಲ್ಲಿಂದ ಓಡಿ ಹೋಗಿದ್ದು, ಮಟ್ಕಾ ಜುಗಾರಿ ನಡೆಸುತ್ತಿದ್ದ ಸಂದೇಶ ಪೂಜಾರಿ (24), ವಾಸ: ವೀರಮಾರುತಿ ವ್ಯಾಯಾಮ ಶಾಲೆಯ ಬಳಿ, ವಿಷ್ಣುಮೂರ್ತಿ ನಗರ, ಕೆಳಾರ್ಕಳಬೆಟ್ಟು ಗ್ರಾಮ, ಉಡುಪಿ ತಾಲೂಕು ಎಂಬಾತನನ್ನು ಬಂಧಿಸಿ ವಶಕ್ಕೆ ತೆಗೆದುಕೊಂಡು ಆತನ ವಶದಲ್ಲಿದ್ದ ಮಟ್ಕಾ ಜುಗಾರಿ ಆಟದ ಬಗ್ಗೆ ಸಂಗ್ರಹಿಸಿದ ಹಣ ರೂಪಾಯಿ 930/- , ಮಟ್ಕಾ ಬರೆದ ಚೀಟಿ-1, ಹಾಗೂ ಬಾಲ್ ಪೆನ್ನು -1ನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

error: No Copying!