ಪಡುಬಿದ್ರಿ: ದಿನಾಂಕ 27-03-2023(ಹಾಯ್ ಉಡುಪಿ ನ್ಯೂಸ್) ಯಾವುದೇ ದಾಖಲೆಗಳಿಲ್ಲದೆ ಐದು ಲಕ್ಷ ರೂಪಾಯಿ ಹಣವನ್ನು ಅಕ್ರಮವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಪಡುಬಿದ್ರಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ (ಕಾನೂನು ಸುವ್ಯವಸ್ಥೆ ) ಪುರುಷೋತ್ತಮ ಎ ಅವರು ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಮುಂಬರುವ ಸಾರ್ವತ್ರಿಕ ವಿಧಾನ ಸಭಾ ಚುನಾವಣಾ ಸಂಬಂದ ನಿಗಾ ವಹಿಸಲು ದಿನಾಂಕ :26-03-2023ರಂದು ವಾಹನ ತಪಾಸಣೆ ಕರ್ತವ್ಯದಲ್ಲಿದ್ದಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ KA-20-ME-2561 ನೇ TOYOTA GLANZA ನೇ ಬಿಳಿ ಬಣ್ಣದ ಕಾರನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ಚಾಲಕನ ಎಡ ಬದಿಯ ಟೂಲ್ಸ್ ಬಾಕ್ಸ್ ಒಳಗಡೆ ಒಂದು ಕೇಸರಿ ಬಣ್ಣದ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿ ಬಂಟ್ವಾಳ ತಾಲೂಕು, ಪ್ರಸಾದ ಎಂಬ ನೀಲಿ ಬಣ್ಣ ಪ್ರಿಂಟ್ ಇರುವ ಕೈ ಚೀಲ ಇದ್ದು ಅದನ್ನು ಪರಿಶೀಲಿಸಿದಾಗ ಅದರೊಳಗೆ 500 ರೂಪಾಯಿ ಮುಖ ಬೆಲೆಯ ಭಾರತೀಯ ಕರೆನ್ಸಿ ನೋಟುಗಳಿರುವ ಒಟ್ಟು ಸೇರಿಸಿ ಬಂಡಲ್ ಮಾಡಿ ಇಟ್ಟಿರುವ ಹಣ ಕಂಡು ಬಂದಿದ್ದು, ಈ ಹಣದ ಕುರಿತು ಕಾರಿನ ಚಾಲಕ ಅಹಮ್ಮದ್ ಕಬೀರ್ ಹಾಗೂ ಕಾರಿನಲ್ಲಿ ಇದ್ದ ಅಬ್ದುಲ್ ಖಾದರ್ ಜೈಲಾನಿ ಎಂಬುವವರನ್ನು ಪೊಲೀಸರು ವಿಚಾರಿಸಿದಾಗ. ಈ ಹಣದ ಬಗ್ಗೆ ದಾಖಲಾತಿಗಳನ್ನು ಕೇಳಿದಾಗ ಯಾವುದೇ ದಾಖಲಾತಿಗಳನ್ನು ನೀಡಿರುವುದಿಲ್ಲ ಹಾಗೂ ತೃಪ್ತಿಕರವಾದ ಉತ್ತರವನ್ನು ನೀಡಿರುವುದಿಲ್ಲ, ಆದ್ದರಿಂದ ರೂಪಾಯಿ 5,00,000/- ಮತ್ತು ಕಾರನ್ನು ಪಡುಬಿದ್ರಿ ಪೊಲೀಸರು ಸ್ವಾಧೀನಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.