Spread the love

ಉಡುಪಿ: ದಿನಾಂಕ:28-03-2023(ಹಾಯ್ ಉಡುಪಿ ನ್ಯೂಸ್) ನಗರದ ಸಿಟಿ ಬಸ್ಸು ನಿಲ್ದಾಣ ಸಮೀಪದ ಆಭರಣ ಚಿನ್ನದ ಅಂಗಡಿ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ನೀರು ರಸ್ತೆಯಲ್ಲಿ ಹರಿದು ಚರಂಡಿ ಸೇರಿ ಪೋಲಾಗುತ್ತಿದೆ.

ನಗರದ ಆಭರಣ ಚಿನ್ನದ ಮಳಿಗೆ ಯಿಂದ ಬಡಗು ಪೇಟೆ ಸಂಪರ್ಕಿಸುವ ರಸ್ತೆಯಲ್ಲಿ ನಗರ ಸಭೆಯ ಕುಡಿಯುವ ನೀರಿನ ಪೈಪ್ ಲೈನ್ ಒಡೆದು ನಿನ್ನೆ ಯಿಂದ ನೀರು ರಸ್ತೆಯಲ್ಲಿ ಹರಿಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ನಗರದಲ್ಲಿ ಕುಡಿಯುವ ನೀರಿಗೆ ಅಭಾವ ಇರುವ ಈ ದಿನಗಳಲ್ಲಿ ಈ ರೀತಿ ಕುಡಿಯುವ ನೀರು ಚರಂಡಿ ಪಾಲಾಗುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ನಗರಸಭೆ ಕೂಡಲೇ ಪೈಪ್ ಲೈನ್ ದುರಸ್ತಿ ಮಾಡಿ ಕುಡಿಯುವ ನೀರು ಪೋಲಾಗುವುದನ್ನು ತಡೆಯ ಬೇಕೆಂದು ಸಾರ್ವಜನಿಕ ರು ಆಗ್ರಹಿಸಿದ್ದಾರೆ.

error: No Copying!