Spread the love

ಗಂಗೊಳ್ಳಿ: ದಿನಾಂಕ 28/03/2023  (ಹಾಯ್ ಉಡುಪಿ ನ್ಯೂಸ್) ಗಂಗೊಳ್ಳಿ ಗ್ರಾಮದ ‌ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.

ಗಂಗೊಳ್ಳಿ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ವಿನಯ ಎಂ ಕೊರ್ಲಹಳ್ಳಿ ಅವರು ದಿನಾಂಕ: 27-03-2023ರಂದು ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಕುಂದಾಪುರ ತಾಲೂಕು ಗಂಗೊಳ್ಳಿ ಗ್ರಾಮದ ಗಂಗೊಳ್ಳಿ ಅರೆಕಲ್‌ಬಳಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ಮಟ್ಕಾ ಜುಗಾರಿ ನಡೆಸುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಕೂಡಲೇ ದಾಳಿ ನಡೆಸಿ ಮಟ್ಕಾ ಜುಗಾರಿ ನಡೆಸುತ್ತಿದ್ದ ಸುರೇಶ ಶೇರುಗಾರ(47), ವಾಸ:ಗಂಗೊಳ್ಳಿ ರಾಮ ಮಂದಿರ ಬಳಿ, ಗಂಗೊಳ್ಳಿ ಗ್ರಾಮ ಕುಂದಾಪುರ ತಾಲೂಕು ಎಂಬಾತನನ್ನು ಬಂಧಿಸಿ ವಶಕ್ಕೆ ಪಡೆದು ಆತ ಮಟ್ಕಾ ಜುಗಾರಿಗೆ ಬಳಸಿದ ಮಟ್ಕಾ ಚೀಟಿ-1, ಬಾಲ್ ಪೆನ್ನು-1 ಹಾಗೂ 520/- ರೂಪಾಯಿ ನಗದನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

error: No Copying!