- ಉಡುಪಿ: ದಿನಾಂಕ: 30/03/2023 (ಹಾಯ್ ಉಡುಪಿ ನ್ಯೂಸ್) ಉಡುಪಿ ನಗರದ ಎರಡು ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಇಬ್ಬರನ್ನು ನಗರ ಠಾಣೆಯ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
- ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ (ಕಾ.ಸು-1) ಮಹೇಶ್ ಟಿ.ಎಂ ಅವರು ದಿನಾಂಕ 29-03-2023ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಉಡುಪಿ ತಾಲೂಕು ಪುತ್ತೂರು ಗ್ರಾಮದ ಅಂಬಾಗಿಲು ಮೀನು ಮಾರುಕಟ್ಟೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿಯು ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿರುವುದಾಗಿ ಸಾರ್ವಜನಿಕ ರಿಂದ ಮಾಹಿತಿ ದೊರೆತ ಮೇರೆಗೆ ಕೂಡಲೇ ದಾಳಿ ನಡೆಸಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಪ್ರವೀಣ್ ಪೂಜಾರಿ (45), ವಾಸ: ಕೊಪ್ಪಲತೋಟ, ಕೋರ್ನೆಟ್ ಐಸ್ ಪ್ಲಾಂಟ್ ಹತ್ತಿರ, ಕೊಡವೂರು ಗ್ರಾಮ, ಮಲ್ಪೆ, ಉಡುಪಿ ತಾಲೂಕು ಎಂಬಾತನನ್ನು ಬಂಧಿಸಿ ವಶಕ್ಕೆ ಪಡೆದು ಆತನ ವಶದಿಂದ ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ ನಗದು ರೂಪಾಯಿ 3,200/- ಮತ್ತು ಮಟ್ಕಾ ನಂಬ್ರ ಬರೆದ ಚೀಟಿ-1, ಬಾಲ್‌ಪೆನ್ ಅನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ . ಹಾಗೂ ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಐರೋಡಿಕರ್ ಜಂಕ್ಷನ್ ಬಳಿ ಅರಳಿ ಮರದ ಬದಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿಯು ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿರುವುದಾಗಿ ಮಾಹಿತಿ ದೊರೆತ ಮೇರೆಗೆ ದಾಳಿ ನಡೆಸಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ರಾಮರಾಜ್ ಅರಸ್ (43), ವಾಸ:ಗುಲಾಬಿ ಶೆಟ್ಟಿ ರವರ ಬಾಡಿಗೆ ಮನೆ, ನಾಗ ದೇವಸ್ದಾನದ ಹತ್ತಿರ, ಮಠದಬೆಟ್ಟು, ಶಿರಿಬೀಡು, ಮೂಡನಿಡಂಬೂರು ಗ್ರಾಮ, ಉಡುಪಿ ತಾಲೂಕು ಎಂಬವನನ್ನು ಬಂಧಿಸಿ ವಶಕ್ಕೆ ಪಡೆದು , ಆತನ ವಶದಿಂದ ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ ನಗದು ರೂಪಾಯಿ 2,800/- ಮತ್ತು ಮಟ್ಕಾ ನಂಬ್ರ ಬರೆದ ಚೀಟಿ-1, ಬಾಲ್‌ಪೆನ್-1 ನ್ನು ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸರು ಸ್ವಾಧೀನಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಇಬ್ಬರ ಮೇಲೂ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 78 (i) (iii) ಕರ್ನಾಟಕ ಪೊಲೀಸ್ ಕಾಯಿದೆಯಂತೆ ಪ್ರಕರಣ ದಾಖಲಾಗಿರುತ್ತದೆ.