images-29.jpeg
Spread the love

ಮಣಿಪಾಲ: ದಿನಾಂಕ :31-03-2023(ಹಾಯ್ ಉಡುಪಿ ನ್ಯೂಸ್) ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಮಟ್ಕಾ ಚೀಟಿ ಬರೆಯುತ್ತಿದ್ದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಮಣಿಪಾಲ ಪೊಲೀಸ್ ಠಾಣೆ ಪಿಎಸ್ಐ ನವೀನ್ ಎಸ್ ನಾಯ್ಕ್ ರವರಿಗೆ ದಿನಾಂಕ 29/03/2023 ರಂದು ಉಡುಪಿ ತಾಲೂಕು ಮಣಿಪಾಲ ಶಿವಳ್ಳಿ ಗ್ರಾಮದ ಸಿಂಡಿಕೇಟ್ ಸರ್ಕಲ್ ಬಳಿ  ಆರೋಪಿ ಯತೀಶ್ ಎಂಬಾತನು ತನ್ನ ಸ್ವಂತ ಲಾಭಕೋಸ್ಕರ ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸುತ್ತಿರುವುದಾಗಿ ಸಾರ್ವಜನಿಕರೋರ್ವರಿಂದ ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಮಟ್ಕಾ ಚೀಟಿ ಬರೆಯುತ್ತಿದ್ದ ಯತೀಶ್ ಎಂಬಾತನನ್ನು ಬಂಧಿಸಿ ವಶಕ್ಕೆ ಪಡೆದು ಹಾಗೂ ಆರೋಪಿ ಬಳಸುತ್ತಿದ್ದ ಮಟ್ಕಾ ಚೀಟಿ, ಬಾಲ್‌ ಪೆನ್‌,  ನಗದು ರೂಪಾಯಿ 985/-ನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: No Copying!