ಗಂಗೊಳ್ಳಿ: ದಿನಾಂಕ 08/04/2023 (ಹಾಯ್ ಉಡುಪಿ ನ್ಯೂಸ್) ತ್ರಾಸಿ ಗ್ರಾಮದ ಪ್ರವಾಸಿ ಮಂದಿರದ ಬಳಿ ಗಾಂಜಾ ಸೇವನೆ ಮಾಡಿದ್ದ ಯುವಕನನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.
ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್‌ಐ ವಿನಯ ಕೊರ್ಲಹಳ್ಳಿ ರವರು ದಿನಾಂಕ 07-04-2023ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ತ್ರಾಸಿ ಗ್ರಾಮದ ತ್ರಾಸಿ ಪ್ರವಾಸಿ ಮಂದಿರದ ಬಳಿ ಒಬ್ಬ ಹುಡುಗನು ಕುಳಿತು ಗಾಂಜಾ ಸೇವಿಸುತ್ತಿರುವುದಾಗಿ ಸಾರ್ವಜನಿಕ ರೋರ್ವರಿಂದ ದೊರೆತ ಮಾಹಿತಿಯಂತೆ ಸಿಬ್ಬಂದಿಯವರೊಂದಿಗೆ ಕೂಡಲೇ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಓರ್ವ ವ್ಯಕ್ತಿಯು ಕುಳಿತುಕೊಂಡಿರುವುದು ಕಂಡು ಬಂದಿದ್ದು, ಆತನ ಹೆಸರು ವಿಳಾಸವನ್ನು ವಿಚಾರಿಸಿದಾಗ ಆತ ಅಬ್ದುಲ್ ಮುನಾಫ್, (20), ವಾಸ: ನಿರೋಣಿ, ಮರವಂತೆ ಗ್ರಾಮ, ಬೈಂದೂರು ತಾಲೂಕು ಎಂಬುವುದಾಗಿ ತಿಳಿಸಿದ್ದು ಆತನು ಗಾಂಜಾದಂತಹ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ಪೊಲೀಸರಿಗೆ ಅನುಮಾನ ಬಂದಿರುವುದರಿಂದ ಆತನನ್ನು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ವೈಧ್ಯಾದಿಕಾರಿಯವರ ಮುಂದೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆತನು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ವರದಿ ನೀಡಿರುತ್ತಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಆತನ ಮೇಲೆ ಕಲಂ: 27(B) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ.