ಗಂಗೊಳ್ಳಿ: ದಿನಾಂಕ: 11/04/2023 (ಹಾಯ್ ಉಡುಪಿ ನ್ಯೂಸ್) ತ್ರಾಸಿ ಬೀಚ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ವ್ಯಕ್ತಿಯನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.
ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್ಐ ಯವರಾದ ವಿನಯ್ ಎಮ್ ಕೊರ್ಲಹಳ್ಳಿ ಅವರು ದಿನಾಂಕ:09-04-2023ರಂದು ಮರವಂತೆ ಬಳಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ತ್ರಾಸಿ ಗ್ರಾಮದ ತ್ರಾಸಿ ಬೀಚ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿ ಮದ್ಯಪಾನ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೊರೆತ ಮಾಹಿತಿಯಂತೆ ಆ ಸ್ಥಳಕ್ಕೆ ಹೋಗಿ ನೋಡಿದಾಗ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಆಪಾದಿತ ಸಂತೋಷ ಎಂಬಾತನನ್ನು ಬಂಧಿಸಿ ವಶಕ್ಕೆ ಪಡೆದಿರುತ್ತಾರೆ.ಈ ಬಗ್ಗೆ ಆತನ ಮೇಲೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಕಲಂ: 15 (A) K E Act ನಂತೆ ಪ್ರಕರಣ ದಾಖಲಾಗಿದೆ.