ಕಾಪು: ದಿನಾಂಕ : 12/04/2023 (ಹಾಯ್ ಉಡುಪಿ ನ್ಯೂಸ್) ಮಲ್ಲಾರು ಗ್ರಾಮ ಪಂಚಾಯತ್ ಕಚೇರಿ ಬಳಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ಯುವಕನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಕಾಪು ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ಸುಮಾ ಬಿ (ಕಾನೂನು ಸುವ್ಯವಸ್ಥೆ) ಅವರು ದಿನಾಂಕ 10-04-2023 ರಂದು ಸಿಬ್ಬಂದಿಯವರೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಕಾಪು ತಾಲೂಕು, ಮಲ್ಲಾರು ಗ್ರಾಮದ ಮಲ್ಲಾರು ಗ್ರಾಮ ಪಂಚಾಯತ್ ಕಛೇರಿಯ ಬಳಿ ಅನುಮಾನಾಸ್ಪದವಾಗಿ ಓರ್ವ ವ್ಯಕ್ತಿ ಅವರಿಗೆ ಕಂಡು ಬಂದಿದ್ದು, ಆತನನ್ನು ಪೊಲೀಸರು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಮಾದಕ ಸೇವನೆಯ ನಶೆಯಲ್ಲಿರುವ ಬಗ್ಗೆ ಅನುಮಾನಗೊಂಡು ಆತನನ್ನು ಬಂಧಿಸಿ ವಶಕ್ಕೆ ಪಡೆದುಕೊಂಡು ಆತನ ಹೆಸರು, ವಿಳಾಸವನ್ನು ಪೊಲೀಸರು ವಿಚಾರಿಸಿದಾಗ ಆತನ ಹೆಸರು ರಶ್ವೀದ್ (20) ಎಂಬುದಾಗಿ ತಿಳಿಸಿದ್ದು, ಆತನನ್ನು ವೈದ್ಯಕೀಯ ಪರೀಕ್ಷೆಯ ಬಗ್ಗೆ ಪ್ರೊಫೆಸರ್ ಅಂಡ್ ಹೆಡ್ ಕೆ.ಎಂ.ಸಿ ಪೊರೆನ್ಸಿಕ್ ವಿಭಾಗ ಮಣಿಪಾಲ ಇವರ ಮುಂದೆ ಹಾಜರುಪಡಿಸಿದ್ದು, ಪರೀಕ್ಷಿಸಿದ ವೈದ್ಯರು ದಿನಾಂಕ 11/04/2023 ರಂದು ರಶ್ವೀದ್ ಗಾಂಜಾ ಸೇವಿಸಿರುವ ಬಗ್ಗೆ ದೃಢಪತ್ರ ನೀಡಿರುತ್ತಾರೆ ಎನ್ನಲಾಗಿದೆ . ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಕಲಂ: 27 (b) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ.