Spread the love

ಕುಂದಾಪುರ: ದಿನಾಂಕ:27-04-2023(ಹಾಯ್ ಉಡುಪಿ ನ್ಯೂಸ್) ಬೈಂದೂರು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆಯವರು ದೇವಸ್ಥಾನ ವೊಂದರಲ್ಲಿ ಚುನಾವಣಾ ಪ್ರಚಾರ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಎಸ್.ಮಣಿಕಂಠ ಎಂಬವರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದು;ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

“ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಗುರುರಾಜ್‌ ಗಂಟಿಹೊಳೆ ಹಾಗೂ ಅವರ ಪದಾಧಿಕಾರಿಗಳು ಸೇರಿಕೊಂಡು ದಿನಾಂಕ 25/04/2023 ರ ಮಂಗಳವಾರ ಪೂರ್ವಾಹ್ನ ಬೈಂದೂರು ವಿಧಾನ ಸಭಾ ಕ್ಷೇತ್ರದ ಸಬ್ಲಾಡಿಯ ಶ್ರೀ ಮಾರಿಕಾಂಬಾ ಮತ್ತು ನಂದಿಕೇಶ್ವರ ಹಾಗೂ ಸಪರಿವಾರ ದೇವಸ್ಥಾನದಲ್ಲಿ ಚುನಾವಣಾ ಪ್ರಚಾರ ಮಾಡಿದ್ದಾರೆ ,ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ, ಆದ್ದರಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಗುರುರಾಜ ಗಂಟಿಹೊಳೆ ಹಾಗೂ ಅವರ ಪದಾಧಿಕಾರಿಗಳ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸ ಬೇಕೆಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ಎಸ್. ಮಣಿಕಂಠ ಅವರು 118 ನೇ ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದು ಅದರಂತೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು 118 ನೇ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ಲೈಯಿಂಗ್‌ ಸ್ಕ್ವಾಡ್‌ ಟೀಮ್‌(FST-3)ನ ಅಧಿಕಾರಿಯಾಗಿರುವ ಪ್ರಸನ್ನ ಕುಮಾರ್‌ ಶೇಟ್‌ (45), ಸಹಾಯಕ ಕಾರ್ಯಪಾಲಕ ಅಭಿಯಂತರರು, ವಾರಾಹಿ ಜಲಾಶಯ ಯೋಜನಾ ಉಪ ವಿಭಾಗ-3,  ಸಿದ್ದಾಪುರ, ಉಡುಪಿ ಜಿಲ್ಲೆ ಇವರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ಮೇರೆಗೆ ಪ್ರಸನ್ನ ಕುಮಾರ್ ಶೇಟ್ ರವರು ಘಟನಾ ಸ್ಥಳಕ್ಕೆ ಬೇಟಿ ನೀಡಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಗುರುರಾಜ ಗಂಟಿಹೊಳೆ ಹಾಗೂ ಅವರ ಪದಾಧಿಕಾರಿಗಳು ಮತ್ತು ಶ್ರೀ ಮಾರಿಕಾಂಬಾ ಮತ್ತು ನಂದಿಕೇಶ್ವರ ಹಾಗೂ ಸಪರಿವಾರ ದೇವಸ್ಥಾನಕ್ಕೆ ಸಂಬಂಧಪಟ್ಟವರ ಮೇಲೆ  ಕ್ರಮ ಕೈಗೊಳ್ಳುವಂತೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು ಈ ಬಗ್ಗೆ ಕಲಂ:  07 RELIGIOUS INSTITUTIONS (PREVENTION OF MISUSE) ACT, 1988 ರಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

error: No Copying!