- ಕಾರ್ಕಳ: ದಿನಾಂಕ:31-05-2023(ಹಾಯ್ ಉಡುಪಿ ನ್ಯೂಸ್) ಮುಡಾರು ಗ್ರಾಮದ ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟದಲ್ಲಿ ನಿರತನಾಗಿದ್ದ ವ್ಯಕ್ತಿಯೋರ್ವನನ್ನು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ತೇಜಸ್ವಿ ಅವರು ಬಂಧಿಸಿದ್ದಾರೆ.
- ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ತೇಜಸ್ವಿ ಅವರಿಗೆ ದಿನಾಂಕ 28/05/2023 ರಂದು ಕಾರ್ಕಳ ತಾಲೂಕು ಮುಡಾರು ಗ್ರಾಮದ ಮುಡ್ರಾಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೋಗುವ ಕ್ರಾಸ್ ಬಳಿ ಇರುವ ಸಾರ್ವಜನಿಕ ಬಸ್ಸು ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ಆಡುತ್ತಿದ್ದ ಬಗ್ಗೆ ಬಂದ ಮಾಹಿತಿಯಂತೆ ಕೂಡಲೇ ದಾಳಿ ನಡೆಸಿ ಮಟ್ಕಾ ಜುಗಾರಿ ಬರೆಯುತ್ತಿದ್ದ ಆರೋಪಿ ರಘು. ಎನ್ (46), ವಾಸ: ಮೀನಾ ನಿವಾಸ, ಕಂಬಳಕೋಡಿ ಕೊಪ್ಪಳ ಹತ್ತಿರ, ಬಜಗೋಳಿ ಮುಡಾರು ಗ್ರಾಮ ಎಂಬಾತನನ್ನು ವಶಕ್ಕೆ ಪಡೆದು ಆತನ ವಶದಲ್ಲಿದ್ದ ಮಟ್ಕಾ ಜುಗಾರಿ ಆಟದಿಂದ ಸಂಗ್ರಹಿಸಿದ ನಗದು ರೂಪಾಯಿ 2260/-, ಮಟ್ಕಾ ಬರೆದ ಚೀಟಿ ಮತ್ತು ಹಸಿರು ಬಣ್ಣದ ಬಾಲ್‌ಪೆನ್ -01 ನ್ನು ವಶಕ್ಕೆ ಪಡೆದಿರುತ್ತಾರೆ ಎನ್ನಲಾಗಿದೆ.
- ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 78 (i)(iii) ಕರ್ನಾಟಕ ಪೊಲೀಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿದೆ.