ಮಣಿಪಾಲ: ದಿನಾಂಕ :01-06-2023(ಹಾಯ್ ಉಡುಪಿ ನ್ಯೂಸ್) ಹೆರ್ಗ ಗ್ರಾಮದ ಈಶ್ವರ ನಗರದ ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದವರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆ, ಪೊಲೀಸ್ ನಿರೀಕ್ಷಕರಾದ ದೇವರಾಜ್ ಟಿ ವಿ ಅವರಿಗೆ ದಿನಾಂಕ:30-05-2023ರಂದು ಠಾಣೆಯಲ್ಲಿರುವಾಗ ಉಡುಪಿ ತಾಲೂಕು ಹೆರ್ಗಾ ಗ್ರಾಮದ ಈಶ್ವರ ನಗರದ ಮಹಾಲಸಾ ಎಮರಾಲ್ಡ್ ಎಂಬ ಅಪಾರ್ಟ್ ಮೆಂಟಿನ ರೂಂ ನಂ 302 ರಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಸ್ಥಳೀಯರಿಂದ ದೊರೆತ ಖಚಿತ ಮಾಹಿತಿಯಂತೆ ಕೂಡಲೇ ಅಲ್ಲಿಗೆ ದಾಳಿ ನಡೆಸಿದಾಗ ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದ್ದವರನ್ನು ಬಂಧಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿ ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆನ್ನಲಾಗಿದೆ.
ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಅನೈತಿಕ ಚಟುವಟಿಕೆಗೆ ಕೊಠಡಿಗಳನ್ನು ಒದಗಿಸಿದ ಅಪಾದಿತರಾದ ಪಯಾಜ್ ಮತ್ತು ಸಚಿನ್ ಎಂಬವರು ಪೊಲೀಸ್ ದಾಳಿಯ ಸಮಯ ಸ್ಥಳದಿಂದ ಪರಾರಿಯಾಗಿರುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ: 3, 4, 5, 6, 7 ITP Act ರಂತೆ ಪ್ರಕರಣ ದಾಖಲಾಗಿದೆ..