- ಮಣಿಪಾಲ: ದಿನಾಂಕ 03/06/2023 (ಹಾಯ್ ಉಡುಪಿ ನ್ಯೂಸ್) ಮಣಿಪಾಲ ವಿದ್ಯಾರತ್ನ ನಗರದ ವಿದ್ಯಾರತ್ನ ರೆಸಿಡೆನ್ಸಿ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರು ಯುವಕರನ್ನು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ನವೀನ್ ಎಸ್ ನಾಯ್ಕ ರವರು ಬಂಧಿಸಿದ್ದಾರೆ.
- ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ನವೀನ್ ಎಸ್ ನಾಯ್ಕ ರವರಿಗೆ ದಿನಾಂಕ:28-05-2023 ರಂದು ರಾತ್ರಿ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ವಿದ್ಯಾರತ್ನ ರೆಸಿಡೆನ್ಸಿ , ಮಣಿಪಾಲದ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಕಾಂತೇಶ್ ವಿ ಕಸ್ತೂರಿ (25) ,ಕಿರಣ್ ಪಾಟೀಲ್ ಎಸ್ ವಿ (26), ರಾಕೇಶ್ ಗೌಳಿ(27), ಸುದೀಪ್ ಜೆ (26) ಎಂಬವರು ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡುತ್ತಿದ್ದ ಅನುಮಾನದ ಮೇರೆಗೆ ವಶಕ್ಕೆ ಪಡೆದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ವೈದ್ಯಕೀಯ ಪರೀಕ್ಷೆ ಬಗ್ಗೆ ಹಾಜರುಪಡಿಸಿದ್ದು, ಈ ನಾಲ್ವರು ಯುವಕರೂ ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ 02/06/2023 ರಂದು ದೃಢಪತ್ರವನ್ನು ನೀಡಿರುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ: 27(b) NDPS Act ರಂತೆ ಪ್ರಕರಣ ದಾಖಲಾಗಿದೆ.