Spread the love

ಮಣಿಪಾಲ: ದಿನಾಂಕ: 07/06/2023 (ಹಾಯ್ ಉಡುಪಿ ನ್ಯೂಸ್) ಮಾದಕವಸ್ತು ಗಾಂಜಾ ಸೇವನೆ ಮಾಡಿ ರಸ್ತೆಯಲ್ಲಿ ತೂರಾಡುತ್ತಿದ್ದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ದೇವರಾಜ ಟಿ ವಿ ರವರು ದಿನಾಂಕ:04-06-2023ರಂದು ರಾತ್ರಿ ಗಸ್ತು ಕರ್ತವ್ಯದಲ್ಲಿರುವಾಗ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಜ್ಯುವೆಲ್ ರಾಕ್ ಬಾರ್ ಬಳಿ ಸಾರ್ವಜನಿಕ ರಸ್ತೆಯಲ್ಲಿ  ಆಶಿಶ್‌ ಎಸ್ ಶೆಟ್ಟಿ (22) ಎಂಬಾತ ಮಾದಕವಸ್ತು ಗಾಂಜಾವನ್ನು ಸೇವನೆ ಮಾಡಿರುವಂತೆ ತೂರಾಡುತ್ತಿದ್ದು ಅನುಮಾನದ ಮೇರೆಗೆ ಆತನನ್ನು ಬಂಧಿಸಿ ವಶಕ್ಕೆ ಪಡೆದು ವೈಧ್ಯಕೀಯ ಪರೀಕ್ಷೆ ಬಗ್ಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು ಆರೋಪಿ ಆಶಿಶ್ ಎಸ್ ಶೆಟ್ಟಿ ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು  07/06/2023 ರಂದು ದೃಢಪತ್ರವನ್ನು ನೀಡಿರುತ್ತಾರೆ ಎನ್ನಲಾಗಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಕಲಂ: 27(b) NDPS Act ರಂತೆ ಪ್ರಕರಣ ದಾಖಲಾಗಿದೆ.

error: No Copying!