- ಮಣಿಪಾಲ: ದಿನಾಂಕ : 08-06-2023(ಹಾಯ್ ಉಡುಪಿ ನ್ಯೂಸ್) ಈಶ್ವರ ನಗರದ ಕಟ್ಟಡವೊಂದರಲ್ಲಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕ ಶಾಂತಿ ಭಂಗ ಮಾಡಿದ ಈರ್ವರು ಯುವಕರನ್ನು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ದೇವರಾಜ್ ಟಿ ವಿ ರವರು ಬಂಧಿಸಿದ್ದಾರೆ.
- ಉಡುಪಿ ತಾಲೂಕು ಹೆರ್ಗಾ ಗ್ರಾಮದ ಈಶ್ವರನಗರದ ಕೃಷ್ಣ ಲೀಲಾ ಕಟ್ಟಡದಲ್ಲಿರುವ ಅಡ್ಡಾ ಎಂಬ ದೊಡ್ಡ ರೂಮ್ ನಲ್ಲಿ ಮ್ಯೂಸಿಕ್ ಹಾಕಿಕೊಂಡು ಪಾರ್ಟಿ ಮಾಡುತ್ತಿರುವುದಾಗಿ ದಿನಾಂಕ: 04-06-2023 ರಂದು ಬೆಳಿಗ್ಗೆ ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ದೇವರಾಜ ಟಿ ವಿ ರವರಿಗೆ ಸಾರ್ವಜನಿಕರಿಂದ ಬಂದ ಮಾಹಿತಿಯ ಮೇರೆಗೆ ಅವರು ಸಿಬ್ಬಂದಿಗಳೊಂದಿಗೆ ಕೂಡಲೇ ಹೋಗಿ ಪರಿಶೀಲಿಸಿದಾಗ ಅಲ್ಲಿ ಅತೀಶ್ ಆಚಾರ್ಯ (23) ಹಾಗೂ ರವೀಶ್ ಆರ್ ಬಂಗೇರ (23) ಎಂಬವರನ್ನು ಮಾದಕವಸ್ತು ಗಾಂಜಾವನ್ನು ಸೇವನೆ ಮಾಡಿರುವ ಅನುಮಾನದ ಮೇರೆಗೆ ಬಂಧಿಸಿ,ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ಬಗ್ಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು ಆರೋಪಿಗಳು ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ 07/06/2023 ರಂದು ದೃಢಪತ್ರವನ್ನು ನೀಡಿರುತ್ತಾರೆ ಎನ್ನಲಾಗಿದೆ .
- ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ: 27(b) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ.