ಉಡುಪಿ: ದಿನಾಂಕ:21:06:2023(ಹಾಯ್ ಉಡುಪಿ ನ್ಯೂಸ್) ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಬ್ರಹ್ಮಗಿರಿ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿದ್ದರು.